ಬೆಂಗಳೂರು: ಮುಂದಿನ ಸಿಎಂ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗು ಜಮೀರ್ ನಡುವಿನ ಮಾತಿನ ಸಮರ ತಾರಕಕ್ಕೇರಿದ್ದು, ಸಿದ್ದರಾಮಯ್ಯನವರ ಆಪ್ತ ಶಾಸಕ ಜಮೀರ್ ಅಹಮದ್ ಖಾನ್‌ಗೆ ಹೈಕಮಾಂಡ್ ನೋಟಿಸ್ ನೀಡಿದೆ.
ಬಹಿರಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ತೀವ್ರ ಇರಿಸುಮುರಿಸು ಉಂಟು ಮಾಡಿದ ಆರೋಪದ ಮೇಲೆ ಶಾಸಕ ಜಮೀರ್ ಅಹಮದ್ ಖಾನ್‌ಗೆ ಎಐಸಿಸಿ ನೋಟಿಸ್ ನೀಡಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಎಚ್ಚರಿಕೆ ಪತ್ರ ನೀಡಿದ್ದು, ಪಕ್ಷದ ಶಿಸ್ತು, ಲಕ್ಷಣ ರೇಖೆ ದಾಟದಂತೆ ಸೂಚಿಸಲಾಗಿದೆ. ನಿಮ್ಮ ಇತ್ತೀಚೆಗಿನ ಹೇಳಿಕೆಯಿಂದ ತಪ್ಪು ಸಂದೇಶ ರವಾನೆಯಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಡಿಕೆ ಶಿವಕುಮಾರ್ ವಿರುದ್ಧ ಸಿಎಂ ಕುರ್ಚಿ ವಿಚಾರದಲ್ಲಿ ವಾಕ್ಸಮರ ಆರಂಭಿಸಿ, ಧರ್ಮ, ಜಾತಿ, ಸಮುದಾಯ ಎಳೆದು ತಂದು ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ಉಂಟುಮಾಡಿದ್ದೀರೆಂದು ನೋಟಿಸ್‌ನಲ್ಲಿ ದೂರಲಾಗಿದೆ.
ಈ ಮಧ್ಯೆ, ತನಗೆ ಯಾವುದೇ ರೀತಿಯ ನೋಟಿಸ್ ಬಂದಿಲ್ಲ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಇನ್ನು, ಜಮೀರ್ ಅಹಮ್ಮದ್ ಖಾನ್ ಅವರ ಒಕ್ಕಲಿಗೆ ಸಮುದಾಯದ ಕುರಿತ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಟಿ ರವಿ, ಆರ್. ಅಶೋಕ್, ಕೆಎಸ್ ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಜಮೀರ್‌ಗೆ ತಿರುಗೇಟು ನೀಡಿದ್ದಾರೆ.
ಡಿಕೆಶಿ ಜತೆ ವಾಕ್ಸಮರ: ಶಾಸಕ ಜಮೀರ್‌ಗೆ ಹೈಕಮಾಂಡ್ ನೋಟಿಸ್
Previous Articleಗುಜರಾತ್‌ನಲ್ಲಿ ಮದ್ಯ ಸೇವಿಸಿದ ಹತ್ತು ಜನ ಸಾವು
Next Article ಒಲಿಂಪಿಕ್ ಪದಕ ವಿಜೇತೆಗೆ ಕಿರುಕುಳ