Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖಾದ್ಯ ಪದಾರ್ಥಗಳಿಗೆ ಬಣ್ಣ ಹಾಕುವಂತಿಲ್ಲ | Cotton Candy
    Viral

    ಖಾದ್ಯ ಪದಾರ್ಥಗಳಿಗೆ ಬಣ್ಣ ಹಾಕುವಂತಿಲ್ಲ | Cotton Candy

    vartha chakraBy vartha chakraಮಾರ್ಚ್ 11, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.11- ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಗೋಬಿ ಮಂಚೂರಿ ಚಿಕನ್ ಕಬಾಬ್ ಸೇರಿದಂತೆ ಇತರೆ ತಿನಿಸುಗಳ ತಯಾರಿಕೆ ಮತ್ತು ಮಾರಾಟ ನಿಷೇಧಿಸಲಾಗುತ್ತಿದೆ ಎಂದು ಆತಂಕಗೊಂಡಿದ್ದ ವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
    ಹಾನಿಕಾರಕ ರಾಸಾಯನಿಕ ಬಳಸಿ ತಯಾರಿಸುವ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಸೇರಿದಂತೆ ಇತರೆ ಉತ್ಪನ್ನಗಳನ್ನು ಸೇವಿಸುವ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇವುಗಳ ಮೇಲೆ ನಿಷೇಧ ಹೇರಲಾಗುತ್ತದೆ ಎಂಬ ವರದಿಗಳನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಿರಾಕರಿಸಿದ್ದಾರೆ.

    ಈ ಕುರಿತಂತೆ ಪ್ರಯೋಗಾಲಯಗಳ ವರದಿಯನ್ನು ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಟನ್‌ ಕ್ಯಾಂಡಿ, ಚಿಕನ್ ಕಬಾಬ್ ಮತ್ತು ಗೋಬಿ ಮಂಚೂರಿಗೆ ದಟ್ಟ ಮತ್ತು ಆಕರ್ಷಕ ಬಣ್ಣ ಬರಲು ರೋಡಮೈನ್‌–ಬಿಯನ್ನು ಬಳಸಲಾಗುತ್ತದೆ. ಇದನ್ನು ಆಹಾರದಲ್ಲಿ ಬಳಸುವುದಕ್ಕೆ ನಿಷೇಧವಿದೆ ಎಂದು ಹೇಳಿದರು.
    ರೋಡಮೈನ್‌–ಬಿಯಲ್ಲಿ‌ ಕ್ಯಾನ್ಸರ್‌ಗೆ ಕಾರಣವಾಗುವ ಅಂಶವನ್ನು ಹೊಂದಿದೆ ಎಂದು ಪ್ರಯೋಗಾಲಯದ ಹಲವಾರು ವರದಿಗಳಿಂದ ದೃಢಪಟ್ಟಿದೆ ಈ ಹಿನ್ನೆಲೆಯಲ್ಲಿ ಯಾವುದೇ ಆಹಾರ ಪದಾರ್ಥಗಳಿಗೆ ಇದನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.

    ರೋಡಮೈನ್‌ ರಾಸಾಯನಿಕದ ಬಣ್ಣ ಬಳಸಿ ತಯಾರಿಸಲಾಗುವ ಕಾಟನ್ ಕ್ಯಾಂಡಿ ಚಿಕನ್ ಕಬಾಬ್ ಗೋಬಿ ಮಂಚೂರಿ ಸೇರಿದಂತೆ ಎಲ್ಲ ರೀತಿಯ ಖಾದ್ಯ ವಸ್ತುಗಳ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಬಣ್ಣ ಬಳಸದೆ ಮಾಡಲಾಗುವ ಕಾಟನ್ ಕ್ಯಾಂಡಿ ಸೇರಿದಂತೆ ಯಾವುದೇ ಖಾದ್ಯ ತಯಾರಿಕೆ ಮತ್ತು ಮಾರಾಟದ ಮೇಲೆ ನಿಷೇಧ ಇಲ್ಲ ಎಂದು ಸ್ಪಷ್ಟಪಡಿಸಿದರು.
    ಗೋಬಿ ಮಂಚೂರಿ, ಪಾನಿಪುರಿ, ಕಬಾಬ್‌ ಸೇರಿ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗುವುದು. ಬೀದಿ ಬದಿಯ ತಳ್ಳು ಗಾಡಿ ವ್ಯಾಪಾರಿಗಳಿಂದ ಹಿಡಿದು ಪಂಚ ತಾರಾ ಹೋಟೇಲ್‌ವರೆಗೂ ಆದೇಶ ಅನ್ವಯವಾಗುತ್ತದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಆಹಾರ ಪದಾರ್ಥಗಳನ್ನು ತಯಾರಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ದಂಡ ಮತ್ತು ಜೈಲು ವಾಸವನ್ನೂ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.

    ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ರೂಪಿಸಲಾಗಿರುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ–2006 ರ ನಿಯಮ 59 ರಡಿ 7 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ಮತ್ತು 10 ಲಕ್ಷ ದಂಡ ವಿಧಿಸುವ ಜೊತೆಗೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಿದರು ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ನಿಯಮಿತವಾಗಿ ಎಲ್ಲ ರೀತಿಯ ಹೋಟೆಲ್‌ಗಳು, ಬೀದಿ ಬದಿ ತಳ್ಳುಗಾಡಿಗಳಲ್ಲಿನ ಆಹಾರ ಪದಾರ್ಥಗಳನ್ನು ಪರೀಕ್ಷೆ ನಡೆಸುತ್ತದೆ. ಈ ಕಾರ್ಯಕ್ಕಾಗಿ ಹೆಚ್ಚಿನ ಸಿಬ್ಬಂದಿ ನೇಮಿಸಿಕೊಳ್ಳಲಾಗುವುದು. ಇದಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ’ ಎಂದು ತಿಳಿಸಿದರು.
    ‘ರಾಜ್ಯದಾದ್ಯಂತ ಮಾರಾಟ ಮಾಡುತ್ತಿರುವ ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಸಾಮಾನ್ಯ ಹೋಟೆಲ್‌ಗಳಲ್ಲದೇ ತ್ರಿಸ್ಟಾರ್‌ ಹೋಟೆಲ್‌ಗಳಲ್ಲೂ ಕೃತಕ ಬಣ್ಣಗಳನ್ನು ಬಳಸಿವೆ. ಸದ್ಯಕ್ಕೆ ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ನು ಮಾತ್ರ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇತರ ಆಹಾರ ಪದಾರ್ಥಗಳನ್ನೂ ಪರೀಕ್ಷೆಗ ಒಳಪಡಿಸಲಾಗುವುದು’ ಎಂದು ವಿವರಿಸಿದರು.

    ಅಪಾಯಕಾರಿ ಕಾಟನ್‌ ಕ್ಯಾಂಡಿಯಲ್ಲಿ ಬಳಸುವ ರೋಡಮೈನ್‌–ಬಿ ಅತ್ಯಂತ ಅಪಾಯಕಾರಿ. ದಟ್ಟ ಗುಲಾಬಿ ಅಥವಾ ಇತರ ಬಣ್ಣ ನೀಡುವುದಕ್ಕಾಗಿ ಇದನ್ನು ಬಳಸುತ್ತಾರೆ. ಇದು ಕ್ಯಾನ್ಸರ್‌ಗೆ ಕಾರಣವಾಗುವುದರ ಜತೆಗೆ ಮಿದುಳು, ಮೂತ್ರಪಿಂಡ, ಹೃದಯಕ್ಕೂ ಹಾನಿ ಮಾಡಬಲ್ಲದು ಎಂದು ವಿವರಿಸಿದರು.
    ಇದಲ್ಲದೇ ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕಾಗಿ ಬಳಸುವ ಟಾರ್‌ ಟ್ರಾಸೈನ್‌, ಸನ್‌ಸೆಟ್‌ ಯೆಲ್ಲೊ ಮತ್ತು ಕಾರ್ಮೊಸಿನ್‌ ಕೂಡ ಆರೋಗ್ಯಕ್ಕೆ ಅಪಾಯಕಾರಿ ಎಂದು ಹೇಳಿದರು.
    ರೋಡಮೈನ್‌ ಪ್ಯಾಕ್‌ ಮಾಡಿದ ಆಹಾರಗಳಿಗೆ ಸೀಮಿತ ಪ್ರಮಾಣದಲ್ಲಿ ಬಳಕೆ ಮಾಡಲು ಮಾತ್ರ ಅವಕಾಶ ಇದೆ. ಆದರೆ, ಮನೆ, ಹೋಟೆಲ್‌ ಮತ್ತು ಇತರ ಕಡೆಗಳಲ್ಲಿ ಬಳಸುವುದಕ್ಕೆ ಅನುಮತಿ ಇಲ್ಲ ಎಂದರು.

    Verbattle
    Verbattle
    Verbattle
    ಆರೋಗ್ಯ ಕಾನೂನು ನ್ಯಾಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಿಡದಿ‌ ಮನೆಯೊಂದರಲ್ಲಿ ಸಿಕ್ಕವು 25 ತಲೆ ಬುರುಡೆಗಳು | Bidadi
    Next Article ಚಪ್ಪಲಿಯಲ್ಲಿ ಹೊಡೆದಾಡಿದ ಅಧಿಕಾರಿಗಳು | Bidar
    vartha chakra
    • Website

    Related Posts

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    1 ಟಿಪ್ಪಣಿ

    1. Lpqcjg on ಫೆಬ್ರವರಿ 14, 2026 3:29 ಅಪರಾಹ್ನ

      mcluck FL https://mcluckcasinogm.com/ mcluck IA

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hvigvl ರಲ್ಲಿ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ? ಶಿವಕುಮಾರ್ ಆಟ-ಸಿದ್ದರಾಮಯ್ಯ ಚೆಲ್ಲಾಟ | Congress
    • LinwoodGah ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • LinwoodGah ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.