ಬೆಂಗಳೂರು : ಬೆಳಗಾವಿಯ ರಾಮದುರ್ಗ ಕ್ಷೇತ್ರದ ಮಾಜಿ ಶಾಸಕ ಪಿ.ಎಂ.ಅಶೋಕ್ ಪಟ್ಟಣ ವಿವಾದದ ಬಾಂಬೊಂದನ್ನು ಸಿಡಿಸಿದ್ದಾರೆ.
ಆಪರೇಷನ್ ಕಮಲದ ಸಂದರ್ಭದಲ್ಲಿ ನನಗೂ ಆಫರ್ ಬಂದಿತ್ತು. ಬಿಜೆಪಿ ಸೇರುವಂತೆ ಇತರ ಜಾತಿಯ ನಾಯಕರಿಗೆ ₹15 ಕೋಟಿಯಿಂದ ₹ 20 ಕೋಟಿ ಮತ್ತು ಮಂತ್ರಿಗಿರಿ ಆಮಿಷ ಒಡ್ಡಲಾಯಿತು. ಆದರೆ, ನಾನು ಲಿಂಗಾಯತ ಎಂದು ಗೊತ್ತಾಗಿದ್ದರಿಂದ ₹ 30 ಕೋಟಿ ಮತ್ತು ಪ್ರಮುಖ ಸಚಿವ ಸ್ಥಾನದ ಆಫರ್ ಬಂದಿತ್ತು. ಆಮಿಷಕ್ಕೆ ಒಳಗಾಗದೆ ಕಾಂಗ್ರೆಸ್‍ನಲ್ಲೆ ಉಳಿದೆ’ ಎಂದು ಹೇಳಿದ್ದಾರೆ.
ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬ ಆಚರಣೆ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬುಧವಾರ ಆಯೋಜಿಸಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಎಲ್ಲ ವರ್ಗದ ಮುಖಂಡರ ಜೊತೆ ಗುರುತಿಸಿಕೊಂಡಿರುವ ನಾನು ವೀರಶೈವ ಲಿಂಗಾಯತ ಸಮಾಜದವನು ಎಂದು ಅನೇಕರಿಗೆ ತಿಳಿದಿರಲಿಲ್ಲ. ಲಿಂಗಾಯತ ಎಂದು ಗೊತ್ತಾಗುತ್ತಿದ್ದಂತೆ ಬಿಜೆಪಿಯವರು ನನಗೆ ಗಾಳ ಹಾಕಿದರು ಅದರೆ, ನಾನು ಸಿಲುಕಲಿಲ್ಲ ಎಂದರು.
ಸಿದ್ದರಾಮಯ್ಯ ತಮ್ಮ ಆಡಳಿತದ ಅವಧಿಯಲ್ಲಿ ನಾಡಿನ ಎಲ್ಲ ಸಮಾಜಗಳ ಅಭಿವೃದ್ಧಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದರು. ಐದು ವರ್ಷಗಳವರೆಗೆ ಉತ್ತಮ ಆಡಳಿತ ನೀಡಿದರು. ನಮ್ಮದೇ ತಪ್ಪಿನಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಾಗಲಿಲ್ಲ. ನಮ್ಮ ಯೋಜನೆಗಳ ಬಗ್ಗೆ ಜನರಿಗೆ ಸರಿಯಾಗಿ ತಿಳಿಸಿದ್ದರೆ ಖಂಡಿತ ಅಧಿಕಾರಕ್ಕೆ ಬರುತ್ತಿದ್ದೆವು’ ಎಂದು ಹೇಳಿದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

