Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಪರಿವಾರ ಪರ್ವತ…!!
    ಸುದ್ದಿ

    ಬಿಜೆಪಿ ಪರಿವಾರ ಪರ್ವತ…!!

    vartha chakraBy vartha chakraಜುಲೈ 6, 2022Updated:ಜುಲೈ 6, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ವಂಶಪಾರಂಪರ್ಯ ರಾಜಕಾರಣಕ್ಕೆ ತಮ್ಮಲ್ಲಿ ಅವಕಾಶವಿಲ್ಲ. ಕುಟುಂಬ ರಾಜಕಾರಣದ ವಿರುದ್ಧ ತಮ್ಮ ಹೋರಾಟ ಎನ್ನುತ್ತಿರುವ ಬಿಜೆಪಿ ವಿರುದ್ಧ ಜೆಡಿಎಸ್ ನಾಯಕ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಸಕ್ರಿಯವಾಗಿರುವ 16 ಮನೆತನಗಳ ಪಟ್ಟಿ ನೀಡುವ ಮೂಲಕ ಬಿಜೆಪಿಯನ್ನು ‘ಪರಿವಾರ ಪರ್ವತʼ ಎಂದು ವ್ಯಾಖ್ಯಾನಿಸಿದ್ದಾರೆ.
    ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಅವರು, ‘ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ?’ ಎಂದು ಪ್ರಶ್ನಿಸಿದ್ದಾರೆ.
    ಲಕ್ಕಿಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ‘ಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ ಎಂದು ಕೇಳಿದ್ದಾರೆ.
    ‘ಅಧಿಕಾರದ ನೆರಳೂ ಕಾಣದೆ ಕಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ. ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ’ ಎಂದಿದ್ದಾರೆ.
    ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು? ಮಿಷನ್‌ ದಕ್ಷಿಣ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.
    ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಇದು ಮತ್ತೆ ನಿಮ್ಮ ಅವಗಾಹನೆಗೆ…
    1.ಯಡಿಯೂರಪ್ಪ & ಸನ್ಸ್‌
    2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
    3.ಅಶೋಕ್-ರವಿ
    4.ವಿ.ಸೋಮಣ್ಣ-ಅರುಣ್‌ ಸೋಮಣ್ಣ
    5.ಅರವಿಂದ ಲಿಂಬಾವಳಿ-ರಘು
    6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌
    7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌
    8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
    9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
    10.ಜಾರಕಿಹೊಳಿ ಕುಟುಂಬ
    11.ಕತ್ತಿ ಕುಟುಂಬ
    12.ಜೊಲ್ಲೆ ಕುಟುಂಬ
    13.ಅಂಗಡಿ ಕುಟುಂಬ
    14.ಉದಾಸಿ ಕುಟುಂಬ
    15.ಶ್ರೀರಾಮುಲು ಕುಟುಂಬ
    16.ರೆಡ್ಡಿ ಬ್ರದರ್ಸ್‌’
    ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
    ‘ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ? ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ‘ಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ ‘ಪರಿವಾರಕೋಟಿ’ಯನ್ನೇ ಬರೆಯಬಹುದು’ ಎಂದು ತಿರುಗೇಟು ನೀಡಿದ್ದಾರೆ.

    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleOTP ಜಗಳ: OLA ಕ್ಯಾಬ್ ಡ್ರೈವರ್‌ನಿಂದ ಸಾಫ್ಟ್‌ವೇರ್ ಇಂಜಿನಿಯರ್ ಪ್ರಾಣಹರಣ
    Next Article ಗೃಹಬಳಕೆ ಸಿಲಿಂಡರ್ ದರ ಮತ್ತೆ‌ ಹೆಚ್ಚಳ
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • upxDyers ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • 17icz ರಲ್ಲಿ ಹಾಲು ಉತ್ಪಾದಕರ ಚುನಾವಣೆ ಬ್ಯಾಲೆಟ್ ಪೇಪರ್ ಗಳ ಅಪಹರಣ
    • c5mu3 ರಲ್ಲಿ ರಸ್ತೆಯಲ್ಲಿ ಪುಂಡರ ಹಾವಳಿ.
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe