ಬೆಂಗಳೂರು : ಸರ್ಕಾರದ ಕಾರ್ಯವೈಖರಿ ಹಾಗು ಧೋರಣೆ ಬಗ್ಗೆ ಕೇಳಿಬಂದ ವ್ಯಾಪಕ ಟೀಕೆಗೆ ಮುಖ್ಯಮಂತ್ರಿ ಬೊಮ್ಮಾಯಿ ಮಣಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೆಯಾದ ಮಸೂದ್ ಮತ್ತು ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ.
ಹತ್ಯೆಯಾದ ಬಿಜೆಪಿ ಕಾರ್ಯಕರ್ತರ ಮನೆಗೆ ತೆರಳಿ ಪರಿಹಾರ ವಿತರಿಸಿದ ಮುಖ್ಯಮಂತ್ರಿಗಳ ಕ್ರಮಕ್ಕೆ ಪ್ರತಿ ಪಕ್ಷ ಕಾಂಗ್ರೆಸ್ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರೆ, ಸಾಮಾಜಿಕ ಜಾಲತಣಗಳಲ್ಲೂ ಅಸಮಧಾನ ವ್ಯಕ್ತವಾಗಿತ್ತು. ಸಂವಿಧಾನದ ಆಶಯಗಳನ್ನು ಪಾಲಿಸಬೇಕಾದ ಸರ್ಕಾರ ಒಂದು ವರ್ಗದ ಪರವಾಗಿದೆ ಎಂಬ ಟೀಕೆಗಳು ಕೇಳಿಬಂದಿದ್ದವು.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಇದೀಗ ಈ ವಿಷಯದಲ್ಲಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯ ಹಂತದಲ್ಲಿದೆ. ಆದಷ್ಟು ಬೇಗನೇ ಕೊಲೆಗಡುಕರ ಪತ್ತೆಯಾಗಲಿದೆ. ಇನ್ನೊಂದೆರಡು ಮೂರು ದಿನಗಳಲ್ಲಿ ಪ್ರಕರಣವನ್ನು ಎನ್‌ಐಎ ಗೆ ವರ್ಗಾವಣೆ ಮಾಡುತ್ತೇವೆ. ತಾಂತ್ರಿಕ ಮತ್ತು ಪೇಪರ್ ವರ್ಕ್ ನಡೆಯುತ್ತಿದೆ. ಆದಷ್ಟು ಬೇಗ ಪ್ರಕರಣ ವರ್ಗಾವಣೆ ಮಾಡುತ್ತೇವೆ. ಈಗಾಗಲೇ ಎನ್‌ಐಎಗೆ ಕೇಸ್ ಬಗ್ಗೆ ಅನೌಪಚಾರಿಕವಾಗಿ ತಿಳಿಸಿದ್ದೇವೆ. ಕೆಲವು ಎನ್‌ಐಎ ಅಧಿಕಾರಿಗಳು ಕೇರಳ ಮತ್ತು ಮಂಗಳೂರಿನಲ್ಲಿ ಈಗಾಗಲೇ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
Previous Articleಬಾಲಿವುಡ್ ನಟಿಯರ ನಾಯಿಗೂ ರೂಂ..! : ನಟಿ ಜಯಸುಧಾ ಅಸಮಾಧಾನ
Next Article ಹುಷಾರ್..! ಹುಲಿ ಬಂತು ಹುಲಿ…!