ಹುಬ್ಬಳ್ಳಿ : ಬರ್ತಡೇ ಕೇಕ್ ಕಟ್ ಮಾಡುವ ವೇಳೆ ಬಳಸುವ ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಹತ್ತು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಈ ಘಟನೆ ಹುಬ್ಬಳ್ಳಿಯ ತಾರಿಹಾಳದಲ್ಲಿ ಶನಿವಾರ ಸಂಭವಿಸಿದೆ. ದುರ್ಘಟನೆಯಲ್ಲಿ ಗಾಯಗೊಂಡ ಎಲ್ಲ 10 ಜನರ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಖಾನೆಯಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.