ಕಿರುತೆರೆಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ನರಳುತ್ತಿದ್ದ ಬಾಲಾಜಿ ಇಂದು ಇಹಲೋಕ ತ್ಯಜಿಸಿದ್ದಾರೆ ಎಂದು ಖ್ಯಾತ ನಿರ್ದೇಶಕ ಟಿ.ಎನ್. ಸೀತಾರಾಮ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ಸೀತಾರಾಮ್ ಅವರ ಬಹುತೇಕ ಧಾರಾವಾಹಿಗಳಲ್ಲಿ ಬಾಲಾಜಿ ನಟಿಸುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ.
T N ಸೀತಾರಾಮ್ -“ನನ್ನ ಆತ್ಮೀಯ ಗೆಳೆಯ ಯಲಹಂಕ ಬಾಲಾಜಿ ಅಲ್ಪ ಕಾಲದ ಅನಾರೋಗ್ಯ ದ ನಂತರ ನಿಧನ ಹೊಂದಿದ್ದಾರೆ. ನನ್ನ ಎಲ್ಲಾ ಧಾರಾವಾಹಿಗಳಲ್ಲೂ ನಟಿಸಿದ್ದರು. ಮಾಯಾಮೃಗದಿಂದ, ಮಗಳು ಜಾನಕಿಯವರೆಗೆ ಅತ್ಯಂತ ಹೃದಯವಂತ ಗೆಳೆಯ.
ಎಲ್ಲ ಕಷ್ಟಗಳಲ್ಲೂ, ಸಂತೋಷಗಳಲ್ಲೂ ಜತೆಗೆ ಇರುತ್ತಿದ್ದ ಮನುಷ್ಯ. ಇಡೀ ಬದುಕಿನುದ್ದಕ್ಕೂ ಕಷ್ಟ ಕಂಡಿದ್ದರೂ ನಗುತ್ತಾ ಬದುಕಿದ ಗೆಳೆಯ ಬಾಲಾಜಿ ಇನ್ನಿಲ್ಲ ಎಂದು ನೆನೆಸಿಕೊಂಡರೆ ಅಪಾರ ಸಂಕಟವಾಗುತ್ತದೆ. ತೀವ್ರ ನೋವಿನ ವಿದಾಯ ಬಾಲಾಜಿ ಎಂದು ಟಿ.ಎನ್.ಸೀತಾರಾಮ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.