ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಮಂಜೇಶ್ವರ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲಾದ ಬೈತಡ್ಕ ಮಸೀದಿಯ ಬಳಿಯಿರುವ ಕಿರುಸೇತುವೆಯಿಂದ ಕಾರೊಂದು ಹೊಳೆಗೆ ಬಿದ್ದು ಯುವಕರಿಬ್ಬರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿದ್ದ ಇಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದೆ.
ಬೈತಡ್ಕ ಸೇತುವೆಯಿಂದ 250 ಮೀಟರ್ ದೂರದ ಮರಕ್ಕಡ ಜೇಡರಕೇರಿಯ ಮಂಜಯ್ಯ ಆಚಾರ್ಯ ಎಂಬುವವರ ಮನೆಯ ಬಳಿ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಜುಲೈ 10ರ ಮಧ್ಯರಾತ್ರಿ ಬೈತಡ್ಕ ಹೊಳೆಗೆ ಕಾರು ಬಿದ್ದಿದ್ದು, ಬಂಟ್ವಾಳ ತಾಲೂಕಿನ ವಿಟ್ಲದ ಧನಂಜಯ(25) ಮತ್ತು ಧನುಷ್ (24) ನಾಪತ್ತೆಯಾಗಿದ್ದರು. ಸ್ಥಳೀಯರು ಕಾರು ಮೇಲಕ್ಕೆತ್ತಿ, ಬಳಿಕ ಯುವಕರ ಪತ್ತೆಗಾಗಿ ಸತತ ಎರಡು ದಿನಗಳ ಕಾಲ ಕಾರ್ಯಾಚರಣೆ ನಡೆಸಲಾಗಿತ್ತು. ಆದರೂ ಕೂಡ ಇಬ್ಬರು ಯುವಕರು ಪತ್ತೆಯಾಗಿರಲಿಲ್ಲ. ಇದೀಗ ಇಬ್ಬರ ಮೃತದೇಹ ಪತ್ತೆಯಾಗಿದೆ. ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕಾರು ಹೊಳೆಗೆ ಬಿದ್ದ ಪ್ರಕರಣ; ಇಬ್ಬರ ಮೃತದೇಹ ಪತ್ತೆ
Previous Articleಪ್ಯಾನ್ ಇಂಡಿಯಾ ಚಿತ್ರ ಕಡವ
Next Article ಚಾಮರಾಜಪೇಟೆ ಬಂದ್ಗೆ ಮಿಶ್ರ ಪ್ರತಿಕ್ರಿಯೆ