ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಪ್ರವೀಣ್ ಹತ್ಯೆ ಕೇಸ್ ಅನ್ನು ಎನ್ಐಎಗೆ ಹಸ್ತಾಂತರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಕರ್ನಾಟಕ-ಕೇರಳ ಗಡಿ ಪ್ರದೇಶದಲ್ಲಿ ಕಟ್ಟೆಚರ ವಹಿಸಲಾಗುತ್ತಿದ್ದು, ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಸುರತ್ಕಲ್ನಲ್ಲಿ ನಡೆದ ಮತ್ತೊಬ್ಬ ಯುವಕನ ಹತ್ಯೆ ಬಗ್ಗೆಯೂ ತೀವ್ರ ತನಿಖೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದರು.
ಸ್ವಲ್ಪ ದಿನಗಳ ನಂತರ ಧಾರ್ಮಿಕ ಮುಖಂಡರ ಸಭೆ ನಡೆಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರಯತ್ನ ನಡೆಸಲಾಗುವುದು. ಪ್ರವೀಣ್ ಹತ್ಯೆಯಲ್ಲಿ ಹೊರ ರಾಜ್ಯದವರ ಕೈವಾಡ ಇದೆ. ಪ್ರಕರಣ ಕುರಿತು ತೀವ್ರಗತಿಯಲ್ಲಿ ತನಿಖೆ ನಡೆಯುತ್ತಿದೆ ಎಂದರು.