ಕನ್ನಡ ಚಿತ್ರರಂಗದಲ್ಲಿ ಸಿಂಹಾದ್ರಿ ಪ್ರೊಡಕ್ಷನ್ಸ್ ಮೂಲಕ ಉತ್ತಮ ಚಿತ್ರಗಳನ್ನು ನೀಡಿರುವ ರಮೇಶ್ ಕಶ್ಯಪ್ ನಿರ್ಮಿಸಿರುವ “ರಾಕ್ಷಸರು” ಚಿತ್ರ ಆಗಸ್ಟ್ ನಲ್ಲಿ ದೇಶದಾದ್ಯಂತ ತೆರೆ ಕಾಣುತ್ತಿದೆ.
ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗು ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.
ಇದೊಂದು ಸಖತ್ ಕ್ರೈಮ್ ಥ್ರಿಲ್ಲರ್ ಚಿತ್ರ. ಐದು ಜನ ಕ್ರಮಿನಲ್ ಗಳು ಮಾಡಬಾರದ ದುಷ್ಕೃತ್ಯಗಳನ್ನು ಮಾಡಿ ತಲೆ ಮರಸಿಕೊಂಡಿರುತ್ತಾರೆ. ಇವರನ್ನು ಪೊಲೀಸರು ಹೇಗೆ ಹುಡುಕುತ್ತಾರೆ? ಎಂಬುದೇ ಕಥಾಹಂದರ. ದಂಡುಪಾಳ್ಯದ ಕ್ರಿಮಿನಲ್ ಗಳನ್ನು ಮೀರಿಸುವ ಕ್ರಿಮಿನಲ್ ಗಳು ಈ “ರಾಕ್ಷಸರು”. ರಜತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ಚಿತ್ರ.
ಚಿತ್ರ ಸಿದ್ದವಾಗಿ ಬಹಳ ದಿನಗಳಾಗಿದೆ. ಆದರೆ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಿ, ಕ್ರೈಂ ಹೆಚ್ಚಾಗಿರುವುದರಿಂದ ಬಿಡುಗಡೆಗೆ ಒಪ್ಪಿಗೆ ನೀಡಲು ನಿರಾಕರಿಸಿದರು.
ಆ ನಂತರ ನಿರ್ಮಾಪಕರ ಮನವಿ ಮೇರೆಗೆ ಕೆಲವು ಕಟ್ ಗಳ ಜೊತೆಗೆ ಎ ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಸೆನ್ಸಾರ್ ಮಂಡಳಿ ಒಪ್ಪಿಗೆ ನೀಡಿದೆ.
ಎ ಸರ್ಟಿಫಿಕೇಟ್ ನೊಂದಿಗೆ ಆಗಸ್ಟ್ ಎರಡನೇ ವಾರ ಚಿತ್ರ ಭಾರತದಾದ್ಯಂತ ತೆರೆ ಕಾಣುತ್ತಿದೆ ಎಂದು ತಿಳಿಸಿರುವ ನಿರ್ಮಾಪಕರು, ಈ ಚಿತ್ರವನ್ನು ಆರಕ್ಷಕರಿಗೆ ಅರ್ಪಿಸಲು ನಿರ್ಧರಿಸಿದ್ದಾರೆ.
ಎರಡು ಹಾಡುಗಳಿರುವ ಈ ಚಿತ್ರಕ್ಕೆ ಎಮಿಲ್ ಸಂಗೀತ ನೀಡಿದ್ದಾರೆ. ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ಜನಾರ್ದನ ಬಾಬು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗು ಮನು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಡೈಲಾಗ್ ಕಿಂಗ್ ಸಾಯಿಕುಮಾರ್, ರಾಜಶೇಖರ್, ನಾಜರ್, ಸುಮನ್, ಕಿರಣ್ ಸುನೀಲ್, ತ್ರಿವೇಣಿ, ಅವಿನಾಶ್ ನೀರಜ್ ಯಾದವ್, ಹರ್ಷಿತ್, ಚೈತ್ರ, ಮಾನಸ, ಆಶಾ, ಮಂಜುಳ, ಸುರೇಖ, ರಚನ, ಕಮಲ, ಚಂದ್ರಕಲಾ ರಾಧ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Previous Articleಸೆ.2 ಕ್ಕೆ ತಾಜ್ ಮಹಲ್ 2
Next Article ಹುಬ್ಬಳ್ಳಿಯಲ್ಲಿ ಇಂದು, ನಾಳೆ ವರ್ಬೆಟಲ್ ಡಿಬೇಟ್ ಕಾಂಪಿಟಿಶನ್