ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಲಾಲ್ಬಾಗ್ನಲ್ಲಿಂದು ಆರಂಭವಾದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭಿಮಾನಿಗಳ ಒತ್ತಾಸೆಯಂತೆ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನಮ್ಮ ಸರ್ಕಾರ ಈಗಾಗಲೇ ನೀಡಲು ತೀರ್ಮಾನಿಸಲಾಗಿದೆ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತೇವೆ ಎಂದು ಹೇಳಿದರು. ಅಲ್ಲದೆ
ಈ ಕುರಿತು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ‘ಕನ್ನಡ ಚಿತ್ರರಂಗದ ಮೇರುನಟ ದಿ. ಡಾ. ಪುನೀತ್ ರಾಜ್ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ನವೆಂಬರ್ 1ರಂದು ಪ್ರದಾನ ಮಾಡಲು ತಿರ್ಮಾನಿಸಲಾಗಿದೆ’ ಎಂದು ಅವರು ಪೋಸ್ಟ್ ಮಾಡಿದ್ದಾರೆ.
ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ
Previous Articleಪ್ರವೀಣ್ ನೆಟ್ಟಾರ್ ಪ್ರಕರಣ ಎನ್ ಐಎ’ಗೆ ಹಸ್ತಾಂತರವಾಗಿಲ್ಲ-ಎಡಿಜಿಪಿ
Next Article ಸಿಎಂ ಬೊಮ್ಮಾಯಿಗೆ ಕೊರೋನಾ