ನಟಿ, ನಿರ್ಮಾಪಕಿ ಪ್ರಿಯಾಂಕಾ ಉಪೇಂದ್ರ ಅವರಿಗೆ ಕಲೆ ಹಾಗು ಸಾಮಾಜಿಕ ಕಾರ್ಯವನ್ನು ಮೆಚ್ಚಿ ಯೂನಿವರ್ಸಲ್ ಡೆವಲಪ್ಮೆಂಟ್ ಕೌನ್ಸಿಲ್ನಿಂದ ಇಂಡಿಯನ್ ಎಂಪೈರ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಈ ಹಿನ್ನೆಲೆ ಪ್ರಿಯಾಂಕಾ ನಟಿಸುತ್ತಿರುವ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ಶೂಟಿಂಗ್ ಸೆಟ್ನಲ್ಲಿ ಅವರ ತಾಯಿಯಿಂದಲೇ ಪ್ರಿಯಾಂಕಾ ಉಪೇಂದ್ರ ಅವರಿಗೆ ಸನ್ಮಾನ ಮಾಡಲಾಯಿತು. ಡಾಕ್ಟರೇಟ್ ಸಿಕ್ಕಿರುವುದು ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ಸಂತಸ ತಂದಿದೆ. ಸಧ್ಯ ಹಲವು ಸಿನಿಮಾ ಕೆಲಸಗಳಲ್ಲಿ ಪ್ರಿಯಾಂಕಾ ಉಪೇಂದ್ರ ಬ್ಯುಸಿ ಆಗಿದ್ದಾರೆ.