ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಡಾಲಿ ಧನಂಜಯ ಅಭಿನಯದ ‘ಹೊಯ್ಸಳ’ ಚಿತ್ರದ ಸೆಟ್ ಗೆ ಭೇಟಿ ನೀಡಿದ್ದಾರೆ. ರಮ್ಯಾ ಸಿನಿಮಾ ಬಿಟ್ಟು ರಾಜಕೀಯ ಸೇರಿದ ಮೇಲೆ ಚಿತ್ರರಂಗದಿಂದ ಸಂಪೂರ್ಣ ದೂರ ಹೋಗಿದ್ದರು. ಚಿತ್ರೀಕರಣದ ವೇಳೆ ರಮ್ಯಾ ಮತ್ತು ಡಾಲಿ ಧನಂಜಯ್ ಅವರು ಜೊತೆಯಾಗಿ ಕುಳಿತು ಮಾತನಾಡಿದ ವಿಡಿಯೋ ವೈರಲ್ ಆಗಿದೆ. ರಮ್ಯಾ ಮತ್ತೆ ಚಿತ್ರೀಕರಣ ಸ್ಥಳದಲ್ಲಿ ಕಾಣಿಸಿಕೊಂಡಿರುವುದನ್ನು ನೋಡಿ ಅಭಿಮಾನಿಗಳು ಫುಲ್ ಖುಶ್ ಆಗಿದ್ದಾರೆ. ಚಿತ್ರೀಕರಣದ ಸ್ಥಳಕ್ಕೆ ಭೇಟಿ ನೀಡಿದ್ದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ರಮ್ಯಾ ಬರೆದುಕೊಂಡಿದ್ದಾರೆ. ‘ವಾರಾಂತ್ಯದಲ್ಲಿ ವಿಜಯ್ ಅವರು ನಿರ್ದೇಶಿಸುತ್ತಿರುವ ‘ಹೊಯ್ಸಳ’ ಚಿತ್ರದ ಸೆಟ್ಗೆ ಭೇಟಿ ನೀಡಿದೆ. ಇಂಟೆನ್ಸ್ ಆ್ಯಕ್ಷನ್ ದೃಶ್ಯವೊಂದನ್ನು ಅವರು ಚಿತ್ರೀಕರಿಸುತ್ತಿದ್ದರು. ಅವರು ಚಿತ್ರೀಕರಿಸಿರುವ ಕೆಲವು ದೃಶ್ಯದ ತುಣುಕುಗಳನ್ನು ನೋಡಿದೆ ಹಾಗು ಅವು ಬಹಳ ಚೆನ್ನಾಗಿ ಮೂಡಿಬಂದಿವೆ’ ಎಂದು ರಮ್ಯಾ ಹೊಗಳಿದ್ದಾರೆ.
ಕಳೆದ ಬಾರಿ ಹೊಯ್ಸಳ ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಜಾಗಕ್ಕೆ ಟೀಂ ಇಂಡಿಯಾ ಆಟಗಾರ್ತಿ ವೇದ ಕೃಷ್ಣಮೂರ್ತಿ ಭೇಟಿ ನೀಡಿದ್ದರು. ಇದೀಗ ಮೋಹಕ ತಾರೆ ರಮ್ಯಾ ಭೇಟಿ ನೀಡಿದ್ದು ಚಿತ್ರತಂಡಕ್ಕೆ ಮತ್ತಷ್ಟು ಖುಷಿಯಾಗಿದೆ.
‘ಹೊಯ್ಸಳ’ ಚಿತ್ರದ ಸೆಟ್ ಗೆ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಭೇಟಿ
Previous Articleಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಪ್ರವಾಸ
Next Article ಮೈದುಂಬಿ ಹರಿಯುತ್ತಿರುವ ಗಗನ ಚುಕ್ಕಿ-ಭರಚುಕ್ಕಿ