ಬೆಂಗಳೂರು, Aug 29: ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಆರ್ಥಿಕ ನೆರವು ಸೇರಿದಂತೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಈ ಮೂಲಕ
ಕರ್ನಾಟಕವನ್ನು ಕ್ರೀಡಾ ಕರ್ನಾಟಕವನ್ನಾಗಿ ಮಾಡುವ ಉದ್ದೇಶ ಸರ್ಕಾರಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಏಕಲವ್ಯ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಅವರು ಮಾತನಾಡಿದರು.
ಪ್ಯಾರಿಸ್ ಒಲಿಂಪಿಕ್ ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾ ಪಟುಗಳಿಗೆ ವಿಶ್ವ ಮಟ್ಟದ ತರಬೇತಿ ನೀಡಲಾಗುತ್ತಿದೆ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ರ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ
ಎಂದು ಹೇಳಿದರು.
ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾಪಟುಗಳಿಗೆ ವಿಶ್ವಮಟ್ಟದ ತರಬೇತಿ ನೀಡಲಾಗುತ್ತಿದೆ. ಇವರಲ್ಲಿ ಹಲವರು ಒಲಂಪಿಕ್ಸ್‍ನಲ್ಲಿ ಪದಕಗಳನ್ನು ಗೆಲ್ಲಬೇಕೆಂಬುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಕ್ರೀಡೆಗಳನ್ನು ಸರ್ಕಾರದ ವತಿಯಿಂದ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ.ಕಬ್ಬಡಿ, ಕೋಕೋ, ಕಂಬಳ, ಎತ್ತಿನಗಾಡಿ ಸ್ಪರ್ಧೆ ಹೀಗೆ ಹಲವು ಕ್ರೀಡೆಗಳು ಗ್ರಾಮೀಣ ಪ್ರದೇಶದ ಸೊಗಡನ್ನು ಸೂಸುತ್ತದೆ. ಗ್ರಾಮಪಂಚಾಯತಿ, ತಾಲ್ಲೂಕು,ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡೆಗಳು ನಡೆಯುತ್ತವೆ. ಗ್ರಾಮಮಟ್ಟದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗುತ್ತಿದೆ ಎಂದರು.
ಪದಕ ಗೆದ್ದವರು ಮಾತ್ರ ಶ್ರೇಷ್ಠರು ಉಳಿದವರು ಶ್ರೇಷ್ಟರಲ್ಲ ಎಂಬ ಭಾವನೆ ಬೇಡ. ಕ್ರೀಡೆಯಲ್ಲಿ ಪ್ರತಿಯೊಬ್ಬರು ಸೋಲುಗೆಲುವುಗಳನ್ನುಸ ಸಮಾನಾಗಿ ತೆಗೆದುಕೊಂಡಾಗ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಕ್ರೀಡೆಯನ್ನು ಸ್ಪರ್ಧಾತ್ಮಕ ಮನೋಭಾವದಿಂದ ತೆಗೆದುಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಪದಕ ಗೆದ್ದ ಕ್ರೀಡಾಪಟುಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡಬೇಕೆಂದು ಮನವಿ ಮಾಡಲಾಗಿತ್ತು. ಅದರಂತೆ ಸರ್ಕಾರ ಪ್ರೋತ್ಸಾಹ ಕೊಟ್ಟಿದೆ. ಇದನ್ನು ಸದುಪಯೋಗಪಡಿಸಿಕೊಂಡು ಮುಂದೆ ಬರಬೇಕೆಂದು ಸಲಹೆ ಮಾಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ .ನಾರಾಯಣಗೌಡ ಮಾತನಾಡಿ,ಕರ್ನಾಟಕದಲ್ಲಿ ಕ್ರೀಡೆಯ ಸಮಗ್ರ ಅಭಿವೃದ್ಧಿಗೆ, ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.
ನಮ್ಮ ಸರ್ಕಾರ ಕ್ರೀಡೆಗೆ, ಕ್ರೀಡಾಪಟುಗಳಿಗೆ ಸಾಕಷ್ಟು ಉತ್ತೇಜನ, ಪ್ರೋತ್ಸಾಹ ನೀಡುತ್ತಿದೆ. ಇಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ನೀಡುವ ಮೂಲಕ ಗ್ರಾಮೀಣ ಮಟ್ಟದಿಂದಲೂ ಕ್ರೀಡಾಪಟುಗಳು ಗುರುತಿಸಿ, ಅವರಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡುತ್ತಿದ್ದೇವೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೂಚನೆಯಂತೆ ಗ್ರಾಮ ಪಂಚಾಯತ್ ಮಟ್ಟದಿಂದ ರಾಜ್ಯಮಟ್ಟದವರೆಗೂ ದೇಸಿ ಕ್ರೀಡೆಗಳಾದ ಕುಸ್ತಿ, ಕಬ್ಬಡ್ಡಿ, ಖೋಖೋ ಮತ್ತು ಎತ್ತಿನಬಂಡಿ ಸ್ಪರ್ಧೆ ಆಯೋಜಿಸಲಾಗುತ್ತಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
15 ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ, 14 ಕ್ರೀಡಾಪಟುಗಳಿಗೆ ಕ್ರೀಡಾರತ್ನ ಪ್ರಶಸ್ತಿ, 05 ಜನರಿಗೆ ಜೀವಮಾನ ಸಾಧನೆ ಪ್ರಶಸ್ತಿ, 10 ಸಂಸ್ಥೆಗಳಿಗೆ ಕ್ರೀಡಾ ಪೋಷಕ ಪ್ರಶಸ್ತಿ, ಸಹಸ್ರ ಕ್ರೀಡಾ ಪ್ರತಿಭಾ ಪುರಸ್ಕಾರ ಯೋಜನೆಯಡಿ 750 ಯುವ ಕ್ರೀಡಾಪಟುಗಳಿಗೆ ತಲಾ ಒಂದು ಲಕ್ಷ ನಗದು ಪುರಸ್ಕಾರ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಸಚಿವ ಡಾ.ನಾರಾಯಣಗೌಡ ಅವರು ಗೌರವಿಸಿದರು.
ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Previous Articleಷೇರು ಮಾರುಕಟ್ಟೆ ಕುಸಿತಕ್ಕೆ ಕಾರಣವಾದ ರಿಲಯನ್ಸ್ AGM
Next Article ಬಿಜೆಪಿ, ನಿಮ್ಮ ಹತ್ತಿರ ಇದೆಯಾ ಉತ್ತರ..?