ಬೆಂಗಳೂರು, ಸೆ.19 – ಜನ ಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹುಕ್ಕಾ ಬಾರ್ ಗಳನ್ನು ನಿಷೇಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಕಟಿಸಿದ್ದಾರೆ.
ಕ್ರೀಡಾ ಸಚಿವ ನಾಗೇಂದ್ರ ಅವರ ಜೊತೆಗೂಡಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹುಕ್ಕಾ ಬಾರ್ ಸೇರಿದಂತೆ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳನ್ನ ನಿಷೇಧಿಸಲು ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವುದಾಗಿ ತಿಳಿಸಿದರು.
ಹುಕ್ಕಾ ಬಾರ್ (Hookah Bar) ಗಳಿಗೆ ಯುವಕರು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಯುವಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಹುಕ್ಕಾ ಬಾರ್ ಗಳಲ್ಲಿ ಮಾದಕ ವಸ್ತುಗಳ ಸೇವನೆಯನ್ನ ನಿಷೇಧಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಹುಕ್ಕಾ ಬಾರ್ ಗಳಿಗೆ ನಿಯಂತ್ರಣ ಹೇರುವಲ್ಲಿ ಕ್ರೀಡಾ ಸಚಿವ ನಾಗೇಂದ್ರ ಅವರು ಕೆಲವು ಸಲಹೆ ನೀಡಿದ್ದು, ಕೋಟ್ಪಾ ಕಾಯ್ಸೆ ತಿದ್ದುಪಡಿಯಲ್ಲಿ ಹುಕ್ಕಾ ಬಾರ್ ಗಳಲ್ಲಿ ನಡೆಯುವ ಮಾದಕ ವಸ್ತುಗಳ ಸೇವನೆಗೆ ನಿಷೇಧ ಹೇರಲು ಕ್ರಮ ಕೈಗೊಳ್ಳುವುದು ಎಂದರು.
ಶಾಲಾ -ಕಾಲೇಜುಗಳ ಮಾದರಿಯಲ್ಲಿ ದೇವಾಲಯಗಳು,ಪ್ರಾರ್ಥನಾ ಮಂದಿರಗಳು ಮತ್ತು ಆಸ್ಪತ್ರೆಗಳ ಸುತ್ತ ಮುತ್ತ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವೆನೆಯನ್ನ ನಿಷೇಧಿಸುವುದಾಗಿ ತಿಳಿಸಿದರು.
ಈ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ಹಿಂದಿನ ಕೋಟ್ಪಾ ಕಾಯ್ದೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆಯನ್ನು ಮಾತ್ರ ನಿಷೇಧಿಸಲಾಗಿತ್ತು.ಇದೀಗ ಸಿಗರೇಟ್ ಜೊತೆಗೆ ಇತರ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಮಾರಾಟವನ್ನ ನಿಷೇಧಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದರು.
21 ವರ್ಷಕ್ಕೆ ಮಿತಿ:
ತಂಬಾಕು ಖರೀದಿಗೆ 18 ವರ್ಷದ ಮೇಲ್ಪಟ್ಟವರಿಗೆ, ಕಾನೂನನಲ್ಲಿ ಇದ್ದ ಅವಕಾಶವನ್ನ ಪರಿಷ್ಕರಿಸಲಾಗುವುದು ಈಗ ತಂಬಾಕು ಸೇವನೆಗೆ 18 ವರ್ಷದ ಮಿತಿ ಇದೆ.ಇದನ್ನು 21 ವರ್ಷಕ್ಕೆ ಹೆಚ್ಚಳ ಮಾಡಿ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು.
ಯಾವುದೇ ಶಾಲೆ, ಕಾಲೇಜು, ಆಸ್ಪತ್ರೆ, ಶಿಶುಪಾಲನಾ ಕೇಂದ್ರಗಳು, ಹೆಲ್ತ್ ಕೇರ್ ಸೆಂಟರ್, ದೇವಸ್ಥಾನಗಳು, ಮಂದಿರಿಗಳು, ಮಸೀದಿಗಳು, ಉದ್ಯಾನವನ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ ಎಂದು ವಿವರಿಸಿದರು.
ತಂಬಾಕು ಸೇವನೆಯ ಬಳಿಕ ಯುವಕರು ಡ್ರಗ್ಸ್, ಮಾದಕ ವಸ್ತುಗಳ ವ್ಯಸನಗಳತ್ತ ಆಕರ್ಷಿತರಾಗುತ್ತಿದ್ದರು. ಇದಕ್ಕೆಲ್ಲಾ ತಂಬಾಕು ಸೇವನೆಯೇ ಒಂದು ರೀತಿಯಲ್ಲಿ ಅಡಿಪಾಯ ಹಾಕಿ ಕೊಡುತ್ತಿತ್ತು. ಹೀಗಾಗಿ ಮೂಲದಲ್ಲೇ ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗಿ ಇಂದಿನ ಯುವಜನತೆ ತಮ್ಮ ಅಮೂಲ್ಯ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಬುಡಸಮೇತ ಕಿತ್ತೆಸೆಯುವ ಗಟ್ಟಿ ನಿರ್ಧಾರವನ್ನ ಮಾಡಿದ್ದೇವೆ. ಎಂದು ಹೇಳಿದರು


1 ಟಿಪ್ಪಣಿ
Doświadcz luksusu w Betano Casino https://betanogame.org/pl/. Otrzymaj fantastyczny bonus powitalny €500 i odkryj premium stoły na żywo. Bezpieczna bankowość i pomoc 24/7 czynią to idealnym.