ಉಡುಪಿ: ಚಿರತೆಯೊಂದು ಮನೆ ಬಾಗಿಲಲ್ಲಿ ಕಟ್ಟಿ ಹಾಕಿದ್ದ ನಾಯಿಯನ್ನು ಸಾಯಿಸಿರುವ ಘಟನೆ ಉಡುಪಿಯ ಹೆರ್ಗಾ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಚಿರತೆಯು ಗೋಳಿಕಟ್ಟೆಯ ಬಾಲಚಂದ್ರ ಕೆದ್ಲಾಯ ಎಂಬುವವರ ಮನೆಯ ಎದುರು ಕಟ್ಟಿ ಹಾಕಿದ್ದ ನಾಯಿಯನ್ನು ಸಾಯಿಸಿದೆ. ಚಿರತೆಯು ಕಳ್ಳ ಹೆಜ್ಜೆಯನ್ನಿಡುತ್ತಾ ಮನೆ ಮೆಟ್ಟಿಲಲ್ಲಿ ಮಲಗಿದ್ದ ನಾಯಿಯನ್ನು ಬೇಟೆಯಾಡಿ, ನಾಯಿಯನ್ನು ಕೊಂಡೊಯ್ಯಲು ಪ್ರಯತ್ನಿಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಜನನಿಬಿಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.