Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೀರ ಕಂಬಳದಲ್ಲಿ ಪ್ರಕಾಶ್ ರೈ
    ಸುದ್ದಿ

    ವೀರ ಕಂಬಳದಲ್ಲಿ ಪ್ರಕಾಶ್ ರೈ

    vartha chakraBy vartha chakraಜೂನ್ 22, 2022Updated:ಜೂನ್ 22, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಮ್ಮ ಐತಿಹಾಸಿಕ ಸಿನಿಮಾ ‘ವೀರ ಕಂಬಳ’ದ ಬಹುತೇಕ ಪೂರ್ಣಗೊಂಡಿದೆ.
    ಸಿನಿಮಾಗಾಗಿ ಕಥೆ ಬರೆಯಲು ನಿರ್ದೇಶಕರು ಸುಮಾರು 2 ವರ್ಷಗಳ ಸಮಯ ತೆಗೆದುಕೊಂಡಿದ್ದಾರೆ.
    ದಕ್ಷಿಣ ಕನ್ನಡದ ಅಚ್ಚುಮೆಚ್ಚಿನ ಕಂಬಳದ ಕುರಿತಾಗಿ ಬರುತ್ತಿರುವ, ವೀರ ಕಂಬಳ ಚಿತ್ರದಲ್ಲಿ ಕಂಬಳದ ಪರ ವಕೀಲರಾಗಿ ಪ್ರಕಾಶ್ ರೈ ನಟಿಸಿದ್ದಾರೆ. ಪ್ರತಿವಾದಿಯಾಗಿ ರವಿಶಂಕರ್ ಅಭಿನಯಿಸಿದ್ದಾರೆ. ಈ ಕೋರ್ಟ್ ಸನ್ನಿವೇಶವನ್ನು ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಸೆರೆ ಹಿಡಿಯಲಾಯಿತು.
    ಎರಡು ವರ್ಷ ಸ್ಕ್ರಿಪ್ಟ್​ ಮಾಡಿದ್ದೇವೆ. 16 ಸಾವಿರ ಪುಟಗಳ ಚರ್ಚೆಯಾಗಿದೆ. ಕೋರ್ಟ್ ದೃಶ್ಯಗಳು, ಈ ವಾದಗಳನ್ನು ಯಾವ ರೀತಿ ತರಬೇಕು ಎಂಬುದು ಮುಖ್ಯ. ಏಕೆಂದರೆ, ಕಾಮೆಂಟರಿ ಅಥವ ಸಾಕ್ಷ್ಯಚಿತ್ರ ಆಗಬಾರದು. ದೊಡ್ಡ ಸವಾಲಿತ್ತು. ತುಂಬಾ ಜನರ ಸಲಹೆ ಪಡೆದೆ.
    ಟಿ.ಎನ್​.ಸೀತಾರಾಮ್ ಅವರಿಂದ ಬೇಕಾದಷ್ಟು ವಿಷಯ ಕಲೆ ಹಾಕಿದೆವು. ಒಂಭತ್ತು ತಿಂಗಳಿನಿಂದ ಇದೊಂದು ಸೀನ್​ ಮೇಲೆ ನಾನು ಮತ್ತು ವಿಜಯ್​ ಕುಮಾರ್​ ಕೊಡಿಯಾಲ್​ಬೈಲ್​ ಕೆಲಸ ಮಾಡುತ್ತಿದ್ದೇವೆ. ಅದೇ ಕಾರಣಕ್ಕೆ ಚಿತ್ರೀಕರಣ ಕೊನೆಯಲ್ಲಿಟ್ಟುಕೊಂಡೆವು.
    ಇದನ್ನು ಹೇಗೆ ಹೇಳಬೇಕು ಎಂದು ಯೋಚಿಸಿ, ಇವತ್ತು ಚಿತ್ರೀಕರಣ ಮಾಡುತ್ತಿದ್ದೇವೆ. ನಾವೇನೇ ಬರೆದಿಟ್ಟುಕೊಂಡರೂ ಪ್ರಕಾಶ್​ ರೈ ಮತ್ತು ರವಿಶಂಕರ್ ಅವರ ಅಭಿನಯ, ದೃಶ್ಯದ ಮೌಲ್ಯ ಹೆಚ್ಚಿಸಿದೆ. ಇಬ್ಬರೂ ಅಪ್ಪಟ ಪ್ರತಿಭಾವಂತರು.
    ಪ್ರಕಾಶ್ ರೈ ಈ ಹಿಂದೆ “ಮುತ್ತಿನ ಹಾರ” ಚಿತ್ರದಲ್ಲಿ ನಟಿಸಿದ್ದರು. ಒಳ್ಳೆಯ ಕ್ಷಣ ಕಳೆದಿದ್ದೇವೆ. ಅದನ್ನು ನೆನಪಿಟ್ಟುಕೊಂಡು ಅವರು ಬಂದು ನಟಿಸುತ್ತಿದ್ದಾರೆ. ಎರಡು ಫೋನ್​​ ಮಾಡಿದೆ. ಅವರು ಒಪ್ಪಿ ನಟಿಸಿದರು. ಹೈದರಾಬಾದ್​ನಿಂದ ನೇರವಾಗಿ ಚಿತ್ರೀಕರಣಕ್ಕೆ ಬಂದರು. ಭಾರತ ಅಲ್ಲ, ಪ್ರಪಂಚದ ಎಲ್ಲ ಭಾಷೆಗಳಲ್ಲೂ ನಟಿಸಲಿ. ಎಲ್ಲಿ ಹೋದರು ಗೆದ್ದು ಬರುತ್ತಾರೆ. ಅವರಿಗೆ ಆ ಪ್ರತಿಭೆ ಇದೆ. ಕನ್ನಡಿಗರ ಆಶೀರ್ವಾದವಿದೆ. ರವಿಶಂಕರ್​ ಬಹಳ ಒಳ್ಳೆಯ ಪಾತ್ರಗಳನ್ನು ಮಾಡುತ್ತಿದ್ದಾರೆ. ಇಲ್ಲೂ ಒಂದೊಳ್ಳೆಯ ಪಾತ್ರವಿದೆ.
    ಇದುವರೆಗೂ ಹಲವು ಕೋರ್ಟ್​ ದೃಶ್ಯಗಳಲ್ಲಿ ಭಾಗವಹಿಸಿದ್ದರೂ ಇದು ಬೇರೆ. ಇದು ನನ್ನ ಮಣ್ಣಿನ ಒಂದು ವಿಷಯ. ಎಲ್ಲರೂ ತಿಳಿದುಕೊಳ್ಳಬೇಕಾದ ಒಂದು ವಿಷಯ. ಇಲ್ಲಿ ಸಂಭಾಷಣೆಯ ಮಾತುಗಳಿಗಿಂತ ನನ್ನ ಭಾವನೆಯೂ ಮುಖ್ಯವಾಗುತ್ತದೆ. ತುಂಬಾ ಒಳ್ಳೆಯ ಕತೆ ಮಾಡಿಕೊಂಡಿದ್ದಾರೆ. ಕತೆ ಹಾಗು ನಿರ್ದೇಶಕ ರಾಜೇಂದ್ರಸಿಂಗ್‌ ಬಾಬು ಅವರಿಗಾಗಿ ಒಂದು ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದೇನೆ. ಇನ್ನೂ ತುಂಬಾ ದಿನಗಳ ನಂತರ ಅಂತೇನು ಇಲ್ಲ. ನಾನು ಕಲಾವಿದ. ಕತೆಗಳಿಗೆ ನನ್ನ ಅಗತ್ಯ ಇದ್ದರೆ ಖಂಡಿತ ಅಂಥ ಚಿತ್ರಗಳ ಜತೆ ನಾನಿರುತ್ತೇನೆ ಎಂದಿದ್ದಾರೆ ಪ್ರಕಾಶ್ ರೈ.
    ಯಾರೋ ಒಬ್ಬರು ಕಂಬಳದ ನೀರು ಕೆಸರು ಎಂದಾಗ, ಇಲ್ಲ ಅದು ಕೆಸರಲ್ಲ, ಅದು ತೀರ್ಥ ಅಂತ ಹೇಳುವ ದೃಶ್ಯಗಳಿವೆ ಎಂದರು ಪ್ರಕಾಶ್ ರೈ. ನಾನು ಈ ಚಿತ್ರದಲ್ಲಿ ನಟಿಸಲು ಮೂರು ಕಾರಣಗಳಿವೆ. ಮೊದಲು ನನಗೆ ತುಳು ಭಾಷೆಯ ಚಿತ್ರದಲ್ಲಿ ನಟಿಸುವ ಆಸೆಯಿತ್ತು.‌ ನಂತರ ನಾನು ರಾಜೇಂದ್ರ ಸಿಂಗ್ ಬಾಬು ಅವರ ಅಭಿಮಾನಿ. “ಬಂಧನ”, ” ಮುತ್ತಿನ ಹಾರ” ಚಿತ್ರಗಳನ್ನು ಸಾಕಷ್ಟು ಸಲ ನೋಡಿದ್ದೀನಿ ಮತ್ತು ಭಾರತದ ಶ್ರೇಷ್ಠ ನಟ ಪ್ರಕಾಶ್ ರೈ ಅವರೊಂದಿಗೆ ನಟಿಸುವ ಅವಕಾಶ ಸಿಕ್ಕಿರುವುದು ಈ ಎಲ್ಲಾ ಕಾರಣಕ್ಕೆ “ವೀರ ಕಂಬಳ” ನನಗೆ ವಿಶೇಷ ಎಂದು ರವಿಶಂಕರ್ ತಿಳಿಸಿದ್ದಾರೆ.
    ಎಆರ್ ಪ್ರೊಡಕ್ಷನ್ಸ್ ಬ್ಯಾನರ್‌ನ ಅರುಣ್ ರಾವ್ ನಿರ್ಮಾಣದ ಈ ಚಿತ್ರಕ್ಕೆ ಖಾದ್ರಿ ಮಣಿಕಾಂತ್ ಅವರ ಸಂಗೀತ ಮತ್ತು ಆರ್ ಗಿರಿ ಅವರ ಛಾಯಾಗ್ರಹಣವಿದೆ. ಇದರಲ್ಲಿ ಕಂಬಳ ಓಟಗಾರರಾದ ಶ್ರೀನಿವಾಸ್ ಗೌಡ ಮತ್ತು ಸ್ವರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

    Verbattle
    Verbattle
    Verbattle
    Entertainment ಕಲೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜಮೀರ್ ಅಹಮದ್ ಖಾನ್ ಬಂಧನ
    Next Article ಪೋರ್ನ್ ವಿಡಿಯೋ ನೋಡಲು ಯುವತಿ ನೇಮಕ: ಗಂಟೆಗೆ ಒಂದೂವರೆ ಸಾವಿರ ರೂ. ಸಂಬಳ!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Williamkendy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • alpha66_qtKr ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.