ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ, ಅವರು ಬರೆದ ನಾಡಗೀತೆಯನ್ನು ತಿರುಚಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹಿಸಿದೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ‘ಕುವೆಂಪು ಅವರ ‘ಜಯಭಾರತ ಜನನಿಯ ತನುಜಾತೆ’ ಕವಿತೆಯನ್ನು ‘ನಾಡಗೀತೆ’ ಮಾಡಬೇಕೆಂದು ಮೊದಲು ನಿರ್ಧರಿಸಿದ ಕಸಾಪ, 1971ರಲ್ಲಿ ಕುವೆಂಪು ಅವರ ಸಮ್ಮತಿ ಪಡೆದು ತನ್ನ ಎಲ್ಲ ಕಾರ್ಯಕ್ರಮಗಳಲ್ಲೂ ಅದನ್ನು ಹಾಡಿಸುತ್ತಿತ್ತು. 2004ರಲ್ಲಿ ಈ ಸಂಬಂಧ ಕರ್ನಾಟಕ ಸರ್ಕಾರ ನಾಡಗೀತೆಯನ್ನಾಗಿ ನಿಗದಿಪಡಿಸಿ ಆದೇಶ ಹೊರಡಿಸಿತು ಎಂದು ಹೇಳಿದ್ದಾರೆ.
ದಾರ್ಶನಿಕ ಕವಿ ಕುವೆಂಪು ಅವರನ್ನು ಅರ್ಥೈಸಿಕೊಂಡಿಲ್ಲದಿರುವವರು ಮಾತ್ರ ನಾಡಗೀತೆ ಮತ್ತು ಕುವೆಂಪು ವಿರುದ್ಧ ಟೀಕಿಸುವಂತಹ ಅಡ್ಡದಾರಿ ಹಿಡಿಯುತ್ತಾರೆ. ಇಂತಹ ವ್ಯಕ್ತಿಗಳ ನಡೆಯನ್ನು ಕಸಾಪದ ಎಲ್ಲ ಹಂತಗಳ ಘಟಕಗಳೂ ಒಕ್ಕೊರಲಿನಿಂದ ಖಂಡಿಸುತ್ತವೆ’ ಎಂದೂ ಅವರು ತಿಳಿಸಿದ್ದಾರೆ.
Previous ArticleAmbulance ಅಪಘಾತ:
Next Article ಇತಿಹಾಸವನ್ನ ಇತಿಹಾಸವಾಗಿಯೇ ನೋಡಿ : ಶ್ರೀ ಯದುವೀರ್ ಒಡೆಯರ್