ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಇನ್ಫೋಸಿಸ್ ನಾರಾಯಣಮೂರ್ತಿ ಹಾಗೂ ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಸೋಮವಾರ ನಾಡಪ್ರಭು ಕೆಂಪೇಗೌಡರ ಜನ್ಮ ದಿನ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಮೂವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಲು ಸರ್ಕಾರ ಉದ್ದೇಶಿಸಿದೆ. ಅದಕ್ಕಾಗಿ ಸದಾಶಿವನಗರದ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ವಿಷಯ ತಿಳಿಸಲು ಬಂದಿದ್ದೇನೆ ಎಂದರು.
ಎಸ್‌ಎಂ ಕೃಷ್ಣ, ನಾರಾಯಣಮೂರ್ತಿ, ಪಡುಕೋಣೆಗೆ ಕೆಂಪೇಗೌಡ ಪ್ರಶಸ್ತಿ
Previous Articleಹಳ್ಳೀಲಿ ಹೆರಿಗೆ ಮಾಡಿಸಿಕೊಂಡ ಸೀರಿಯಲ್ ನಟಿ
Next Article ಆಸ್ಪತ್ರೆಯ ಎಂಟನೇ ಮಹಡಿಯಿಂದ ಜಿಗಿದ ರೋಗಿ