ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ನಟ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.
ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ ಈ ಶುಭಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆ ಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.
ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಹಿಂದೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಟ ಸುದೀಪ್ ಅವರಿಗೆ ಪತ್ರ ಬರೆದು, ಪುಣ್ಯಕೋಟಿ ರಾಯಭಾರಿಯಾಗುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್ ಪಶು ಸಂಗೋಪನೆ ಇಲಾಖೆಯ ರಾಯಭಾರಿ ಕೆಲಸ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ. ಇಂದು ಅವರ ಜನ್ಮದಿನದ ಅಂಗವಾಗಿ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಿರುವ ಕುರಿತು ಅಧಿಕೃತವಾಗಿ ಪತ್ರ ಬರೆಯಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

