ಬೆಂಗಳೂರು,ಜೂ.21 ರಾಜ್ಯದಲ್ಲಿ ಸರ್ಕಾರ ಬದಲಾವಣೆಯ ಬೆನ್ನಲ್ಲೇ ಕರ್ನಾಟಕ ಹಾಲು ಒಕ್ಕೂಟ(ಕೆ.ಎಂ.ಎಫ್)
ದ ಅಧ್ಯಕ್ಷರ ಬದಲಾವಣೆ ಕೂಡ ನಡೆದಿದೆ ಮಾಜಿ ಶಾಸಕ ಭೀಮ ನಾಯಕ್ ಕೆ.ಎಂ.ಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕೆಎಂಎಫ್ ನ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷ ಸ್ಥಾನ ತೊರೆಯುವಂತೆ ಯಾರು ತಮಗೆ ಹೇಳಿರಲಿಲ್ಲ ಆದರೆ ಸರ್ಕಾರ ಬದಲಾವಣೆಯಾಗಿದೆ ಎಂದು ತಾವು ಈ ಹುದ್ದೆಯಿಂದ ನಿರ್ಗಮಿಸುತ್ತಿದ್ದೇನೆ. ಅಲ್ಲದೆ,ಅಧ್ಯಕ್ಷ ಸ್ಥಾನಕ್ಕಾಗಿ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.
ಹೀಗಾಗಿ ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು ಅಧ್ಯಕ್ಷ ಸ್ಥಾನದ ಆಯ್ಕೆ ಬಯಸಿ ಮಾಜಿ ಶಾಸಕ ಭೀಮಾ ನಾಯಕ್ ಮಾತ್ರ ನಾಮಪತ್ರ ಸಲ್ಲಿಸಿದ್ದರು ಹೀಗಾಗಿ ಅವರು ಕೆಎಂಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಚುನಾವಣೆ ಸಮಯದಲ್ಲಿ ಹಾಜರಿದ್ದ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಕರ್ನಾಟಕ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಭಿಮಾನಾಯ್ಕ್ ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಿ ಒಕ್ಕೂಟವನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ರೈತರ ಪರವಾಗಿ ಒಕ್ಕೂಟ ಕಾರ್ಯನಿರ್ವಹಿಸಬೇಕು ಎಂದರು.
Previous ArticleFake ನ್ಯೂಸ್ Viral ತಡೆಗಟ್ಟಲೇಬೇಕು
Next Article ಪ್ರಿಯತಮೆಯನ್ನು ಕೊಂದು ಸುಟ್ಟುಹಾಕಿದ