ಬೆಂಗಳೂರು: ನಗರ ಮತ್ತು ಗ್ರಾಮೀಣ ಪ್ರದೇಶವನ್ನು ಒಳಗೊಂಡ ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಗೆಲುವಿಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ನಡುವೆ ಪೈಪೋಟಿ ಕುತೂಹಲ ಮೂಡಿಸಿದೆ.
ಕಾಂಗ್ರೆಸ್ ಪಕ್ಷದಲ್ಲಿ ಹೊಸ ತಲೆಮಾರಿನ ಮುಂಚೂಣಿ ನಾಯಕನಾಗಿ ಹೊರಹೊಮ್ಮುತ್ತಿರುವ ಹಾಲಿ ಶಾಸಕ ಕೃಷ್ಣ ಬೈರೇಗೌಡ(Krishna Byre Gowda), ಈ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು. ಈ ಬಾರಿಯೂ ಗೆಲುವಿನ ವಿಶ್ವಾಸದಲ್ಲಿದ್ದಾರೆ.
ಕ್ಷೇತ್ರವನ್ನು ವಶಪಡಿಸಿಕೊಳ್ಳುವುದಕ್ಕೆ ಬಿಜೆಪಿ ಸತತ ಪ್ರಯತ್ನ ಮಾಡುತ್ತಿದ್ದು, ಕಾಂಗ್ರೆಸ್‌ನ ನಾಗಾಲೋಟಕ್ಕೆ ಕಡಿವಾಣ ಹಾಕಲು ಕಸರತ್ತು ಆರಂಭಿಸಿದೆ. ಬಿಜೆಪಿಯಿಂದ ತಮ್ಮೇಶಗೌಡ ಮೊದಲ ಬಾರಿಗೆ ಸ್ಪರ್ಧಿಸಿದ್ದು,ಯಶಸ್ಸುಗಳಿಸುವ ವಿಶ್ವಾಸದಲ್ಲಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ಪೈಪೋಟಿ ನಡುವೆ ಜೆಡಿಎಸ್ ಬಲ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದು ಹೊಸ ಮುಖ ನಾಗರಾಜ ಗೌಡ ಅವರಿಗೆ ಟಿಕೆಟ್ ನೀಡಿದೆ.
ಕ್ಷೇತ್ರದಲ್ಲಿ ಒಕ್ಕಲಿಗರು, ಪರಿಶಿಷ್ಟರು ಮತ್ತು ಮುಸ್ಲಿಂ ಸಮುದಾಯದವರೇ ನಿರ್ಣಾಯಕರು. ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಜತೆಗೆ, ವಿವಿಧ ಭಾಷೆಗಳ ಜನರು ಸಹ ಇಲ್ಲಿ ನೆಲೆಸಿದ್ದಾರೆ. (Krishna Byre Gowda)
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಗೆ ಹೊಂದಿಕೊಂಡಿರುವ ಬ್ಯಾಟರಾಯನಪುರ ಕ್ಷೇತ್ರ ವಾಣಿಜ್ಯ ವಹಿವಾಟಿನಲ್ಲಿ ಮುಂದುವರಿದಿದೆ. ಆದರೆ, ಕ್ಷೇತ್ರವು ಮೂಲಸೌಕರ್ಯಗಳ ಸಮಸ್ಯೆಯಿಂದ ಹೊರತಾಗಿಲ್ಲ ಇದನ್ನೇ ಪ್ರತಿಪಕ್ಷ ಅಭ್ಯರ್ಥಿಗಳು ಬಂಡವಾಳ ಮಾಡಿಕೊಳ್ಳಲು ಪ್ರಯತ್ನ ಮಾಡಿವೆ.
ಆದರೆ,ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಕೃಷ್ಣ ಬೈರೇಗೌಡ ಕ್ಷೇತ್ರದಲ್ಲಿ ಮೂಲ ಸೌಕರ್ಯ ಸೃಷ್ಟಿಸಲು ಆದ್ಯತೆ ನೀಡಿದ್ದಾರೆ. ಹೊಸದಾಗಿ ಸೇರ್ಪಡೆಯಾದ ಪ್ರದೇಶದಲ್ಲಿ ಕುಡಿಯುವ ನೀರು, ಒಳ ಚರಂಡಿ ಯೋಜನೆಗಳಿಗೆ ಆದ್ಯತೆ ನೀಡಿರುವುದನ್ನು ಜನರು ಸ್ಮರಿಸುತ್ತಾರೆ.
ಕೋವಿಡ್ ಸಮಯದಲ್ಲಿ ಶಾಸಕರಾಗಿ ಕ್ಷೇತ್ರದಲ್ಲಿ ಕೈಗೊಂಡ ಪ್ರವಾಸ, ಆಮ್ಲಜನಕ ಕೊರತೆಗೆ ಸ್ಪಂದಿಸಿರುವ ಬಗ್ಗೆ ಮತದಾರರಲ್ಲಿ ಕೃತಜ್ಞತೆಯ ಭಾವವಿದೆ ಎನ್ನುತ್ತಾರೆ ಅವರ ಬೆಂಬಲಿಗರು. (Krishna Byre Gowda)
ಸುಶಿಕ್ಷಿತ ಹಾಗೂ ಕ್ಷೇತ್ರದ ಮತದಾರರ ಭೇಟಿಗೆ ಸುಲಭವಾಗಿ ಲಭ್ಯವಾಗುತ್ತಾರೆ ಎನ್ನುವುದು ಇವರಿಗಿರುವ ಪ್ಲಸ್ ಪಾಯಿಂಟ್ ಇವುಗಳ ಆಧಾರದಲ್ಲಿ ದಾಖಲೆ ನಿರ್ಮಿಸುವ ಉತ್ಸಾಹದಲ್ಲಿದ್ದಾರೆ. (Krishna Byre Gowda)
Also read.
ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಅರವಿಂದ್ ಬೆಲ್ಲದ | Arvind Bellad
(Krishna Byre Gowda)

