ವಿಜಯಪುರ,ಜೂ.4- ಆಂಧ್ರಪ್ರದೇಶದ ಸುಕ್ಷೇತ್ರ ಶ್ರೀಶೈಲದಲ್ಲಿ ಕರ್ನಾಟಕದ ಸರ್ಕಾರಿ ಬಸ್ ಚಾಲಕ ಹಾಗು ನಿರ್ವಾಹಕನ ಮೇಲೆ ದಾಳಿ ನಡೆದಿದೆ. ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ಗಾಯಗೊಂಡ ಕೆಎಸ್ಆರ್ಟಿಸಿ ಬಸ್ ಚಾಲಕ ಬಸವರಾಜ್ ಬಿರಾದಾರ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಿಡಿಗೇಡಿಗಳು ವಿಜಯಪುರ ಡಿಪೋಗೆ ಸೇರಿದ ಬಸ್ನ ಕಿಟಕಿ ಗಾಜು ಒಡೆದಿದ್ದಾರೆ. ಬಳಿಕ ಚಾಲಕ ಹಾಗೂ ನಿರ್ವಾಹಕನ ಮೇಲೆ ದಾಳಿ ಮಾಡಲಾಗಿದೆ.
ಬಸ್ ಚಾಲಕ ಬಸವರಾಜ್ ಬಿರಾದಾರ್ ನಿನ್ನೆ ಮಧ್ಯರಾತ್ರಿ ಶ್ರೀಶೈಲ ಬಸ್ ನಿಲ್ದಾಣದ ಬಳಿ ವಾಹನ ನಿಲ್ಲಿಸಿದ್ದಾರೆ. ಬಳಿಕ ಊಟ ಮಾಡಿ ಕಟ್ಟೆಯ ಮೇಲೆ ಮಲಗಿದ್ದಾಗ ಏಕಾಏಕಿ ಬಂದ 10 ರಿಂದ 12 ಮಂದಿ ಪುಂಡರ ಗುಂಪು ಕನ್ನಡಿಗರ ಬಗ್ಗೆ ಅಶ್ಲೀಲ ಪದ ಬಳಸಿ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ಬಸವರಾಜ್ ಸಹಾಯಕ್ಕಾಗಿ ಕೂಗಾಡಿದ್ದಾರೆ. ಕೂಡಲೇ ಇತರ ಚಾಲಕರು ಹಾಗೂ ನಿರ್ವಾಹಕರು ಸ್ಥಳಕ್ಕೆ ದೌಡಾಯಿಸುತ್ತಿದ್ದಂತೆ ಪುಂಡರು ಸ್ಥಳದಿಂದ ಪರಾರಿಯಾಗಿದ್ದಾರೆ. ಚಾಲಕನ ಮುಖ ಹಾಗೂ ಕಾಲಿನ ಭಾಗಕ್ಕೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ದುಷ್ಕರ್ಮಿಗಳ ವಿರುದ್ಧ ಶ್ರೀಶೈಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.ಕಳೆದ ಮಾರ್ಚ್ 31ರ ಯುಗಾದಿ ಸಂದರ್ಭದಲ್ಲಿ ನೀರಿಗಾಗಿ ಕನ್ನಡಿಗರ ಮೇಲೆ ಹಲ್ಲೆಯಾಗಿತ್ತು. ಇದೀಗ ಮತ್ತೇ ಕ್ಯಾತೆ ತೆಗೆದು ಈ ದಾಳಿ ಮಾಡಲಾಗಿದೆ.
Previous Articleಶ್ರೀರಂಗಪಟ್ಟಣ ಹೈ ಅಲರ್ಟ್..!
Next Article ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ