ಬೆಂಗಳೂರು : ರಾಜ್ಯಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆಯಾ..? ಹೌದು ಎನ್ನುತ್ತಾರೆ ಜೆಡಿಎಸ್ ನಾಯಕ ಕುಮಾರಸ್ವಾಮಿ. ಅಷ್ಟೇ ಅಲ್ಲ ಅದಕ್ಕೆ ಕೆಲವು ಅಂಶಗಳನ್ನು ಉದಾಹರಣೆಯಾಗಿ ನೀಡುತ್ತಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅಲ್ಪಸಂಖ್ಯಾತ ಅಭ್ಯರ್ಥಿಯ ಹೆಸರಿನಲ್ಲಿ ಅನುಕಂಪ ಗಿಟ್ಟಿಸಲು ಹೋಗಿ ಅವರೇ ಖೆಡ್ಡಾಗೆ ಬಿದ್ದಿದ್ದಾರೆ. ಇವರು ನಕಲಿ ಕಾಂಗ್ರೆಸ್ನವರು ಎಂದು ಅಪಹಾಸ್ಯ ಮಾಡಿದರು. ರಾಜ್ಯಸಭೆ ಚುನಾವಣೆಯಲ್ಲಿ ನಮಗೆ ಎರಡನೆ ಪ್ರಾಶಸ್ತ್ಯದ ಮತ ಕೂಡಾ ಹಾಕಬೇಡಿ ಎಂದು ಕಾಂಗ್ರೆಸ್ ಶಾಸಕರಿಗೆ ಹೇಳಿದ್ದಾರೆ. ಬಿಜೆಪಿ ಗೆಲ್ಲಿಸೋಕೆ ಸಿದ್ದರಾಮಯ್ಯ ಹೊರಟಿದ್ದಾರೆ. ನಕಲಿ ಜಾತ್ಯಾತೀತ ಎಂದು ವಾಗ್ದಾಳಿ ನಡೆಸಿದರು.
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮನ್ನು ಗೆಲ್ಲಿಸುತ್ತಾರೆ ಎಂದು ಹೇಳಿದ್ದಾರೆ. ಇದರ ನಡುವೆಯೇ ಬಿಜೆಪಿ ನಾಯಕ ಸಿಟಿ ರವಿ ಕಾಂಗ್ರೆಸ್ ಶಾಸಕಾಂಗ ಕಚೇರಿಗೆ ತೆರಳಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸಿದ್ದಾರೆ ಇದೆಲ್ಲಾ ಏನು ಈಗ ಬಿಜೆಪಿ ಬಿ ಟೀಂ ಯಾವುದು ಎಂಬುದು ಈಗ ಗೊತ್ತಾಗಿದೆ ಎಂದರು.
Previous Articleಗ್ಯಾಂಗ್ ರೇಪ್ New twist !
Next Article ಪೊಲೀಸರೊಂದಿಗೆ ಬಿಜೆಪಿ ಶಾಸಕರ ಪುತ್ರಿ ಅನುಚಿತ ವರ್ತನೆ