ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಹಾಗೂ ಮಹದೇವ ಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಅಹವಾಲು ಹೇಳಿ ಕೊಳ್ಳಲು ಬಂದ ಮಹಿಳೆಯನ್ನು ಏರು ದನಿಯಲ್ಲಿ ನಿಂದಿಸಿ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆಧೇಶಿಸುವ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದನ್ನು ನೋಡಿದ ನೆಟ್ಟಿಗರು ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ.ಶಾಸಕರಿಗೆ ಬಂಧನ ಮಾಡುವಂತೆ ಪೊಲೀಸರಿಗೆ ಆದೇಶಿಸುವ ಅಧಿಕಾರವಿದೆಯೇ ಎಂದು ಪ್ರಶ್ನಿಸಿದ್ದಾರೆ
ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಮಹದೇವಪುರದ ಕ್ಷೇತ್ರ ವ್ಯಾಪ್ತಿಯ ಹಲವೆಡೆ ಪ್ರವಾಹ ಉಂಟಾಗಿ ಸಮಸ್ಯೆ ಎದುರಾಗಿ ಸಾರ್ವಜನಿಕರು ಪರದಾಡಿದ್ದರು.
ಇದಕ್ಕೆ ಕಾರಣ ತಿಳಿದುಕೊಳ್ಳಲು ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಪಾಲಿಕೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು ಈ ವೇಳೆ ಅವರು
ನಲ್ಲೂರಹಳ್ಳಿಯ ವೈಟ್‌ಫೀಲ್ಡ್ ಕೋಡಿ ಸರ್ಕಲ್ ಬಳಿಯ ರಾಜಕಾಲುವೆ ಒತ್ತುವರಿ ಆಗಿರುವ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದರು.
ಆಗ ಅಲ್ಲಿನ ರಾಜಕಾಲುವೆಗೆ ಹೊಂದಿಕೊಂಡಂತೆ ಇರುವ ವಾಣಿಜ್ಯ ಕಟ್ಟಡದ ಕೆಲ ಭಾಗವನ್ನು ಜೆಸಿಬಿಯಿಂದ ತೆರವು ಗೊಳಿಸಲು ಸೂಚಿಸಿಸರು.
ಅದರಂತೆ ಕಾಮಗಾರಿ ನಡೆಯುತ್ತಿದ್ದವೇಳೆ ಆ ಕಟ್ಟಡದ ಮಾಲೀಕರು ಎನ್ನಲಾದ ಮಹಿಳೆ ಕೆಲ ದಾಖಲೆಗಳೊಂದಿಗೆ ಸ್ಪಷ್ಟನೆ ನೀಡಲು ಮುಂದಾದರು. ಇದರಿಂದ ಕೆರಳಿದ ಶಾಸಕರು ಮಹಿಳೆ ಜೊತೆ ನಡೆದುಕೊಂಡ ರೀತಿ ಇದೀಗ ವಿವಾದಕ್ಕೆ ಕಾರಣವಾಗಿದೆ.
ಒತ್ತುವರಿ ಮಾಡಿಕೊಂಡು ನನಗೆ ನ್ಯಾಯ ಕೇಳಲು ಬರುತ್ತಿಯಾ, ಮಾನ ಮರ್ಯಾದೆ ಇಲ್ವ ನಿನಗೆ, ನನಗೂ ಬೇರೆ ಭಾಷೆ ಬರುತ್ತೆ. ಇವಳಿಗೆ ಮರ್ಯಾದೆ ಬೇರೆ ಕೇಡು, ಒದ್ದು ಒಳಗೆ ಹಾಕಿ’ ಎಂದು ಸ್ಥಳದಲ್ಲಿದ್ದ ಪೊಲೀಸರಿಗೆ ಸೂಚನೆ ನೀಡಿದರು.
‘ಮರ್ಯಾದೆಯಿಂದ ಮಾತನಾಡಿ. ಹೆಣ್ಣುಮಕ್ಕಳು ಅನ್ನುವ ಗೌರವ ಇರಲಿ. ನೀವು ನನಗೂ ಎಂಎಲ್ಎ. ಎಲ್ಲರಿಗೂ ಶಾಸಕರೇ’ ಎಂದು ಮಹಿಳೆ ಹೇಳಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.
ಘಟನೆ ಬಳಿಕ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಮಹಿಳೆಯನ್ನು ಕರೆದೊಯ್ದ ಪೊಲೀಸರು, ಸಂಜೆ ತನಕ ಅಲ್ಲೇ ಕೂರಿಸಿದ್ದರು. ಸಂಜೆ ಏಳು ಗಂಟೆಯ ವೇಳೆಗೆ ಮಹಿಳೆಯಿಂದ ಹೇಳಿಕೆ ದಾಖಲಿಸಿಕೊಂಡು ಮನೆಗೆ ಕಳುಹಿಸಿದ್ದಾರೆ..
Previous Articleಪುರುಷತ್ವ ಪರೀಕ್ಷೆಯಲ್ಲಿ ಶರಣರು ಫಿಟ್
Next Article ಶುಶೃತಿ ಸಹಕಾರ ಬ್ಯಾಂಕ್ ವಂಚನೆ