ಬೆಂಗಳೂರು : ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇಕಡಾ 40ರಷ್ಟು ಕಮೀಷನ್ ಆರೋಪದಿಂದ ಬಿಜೆಪಿ ತತ್ತರಿಸಿರುವ ಬೆನ್ನಲ್ಲೇ ಕಮೀಷನ್ ಲಂಚ ಪಡೆಯುವ ವೇಳೆ ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್) ರಾಸಾಯನಿಕ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ₹ 40 ಲಕ್ಷ ಲಂಚ ಪಡೆದ ಕಾರ್ಖಾನೆಯ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕೆಲಸ ಮಾಡಿತ್ತಿದ್ದು ಸದ್ಯ ನಿಯೋಜನೆ ಮೇರೆಗೆ ಬೆಂಗಳೂರು ಜಲ ಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಪ್ರಶಾಂತ್ ಮಾಡಾಳ್ ತಂದೆಯ ಪರವಾಗಿ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು ಬಂಧಿಸಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ಪ್ರಶಾಂತ್, ನಿಯೋಜನೆ ಮೇಲೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ಅವರು ಹೊಂದಿರುವ ಖಾಸಗಿ ಕಚೇರಿಯೊಂದರಲ್ಲಿ ಸಂಜೆ 6.45ಕ್ಕೆ ಲಂಚದ ಹಣ ಪಡೆಯುವಾಗ ಬಂಧಿಸಲಾಗಿದೆ.
ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಕೆಗೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ ಮಾಡಾಳ್ ವಿರೂಪಾಕ್ಷಪ್ಪ ₹81 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನು ಮಗನಿಗೆ ತಲುಪಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದರು ಎಂದು ಹೇಳಲಾಗಿದೆ.
Previous Articleಪೊರಕೆ ಬಿಟ್ಟು ಕಮಲ ಹಿಡಿದ ಭಾಸ್ಕರ್ ರಾವ್
Next Article ಬೈಕ್ನಲ್ಲಿ ಅಕ್ರಮ ಸಾಗಾಣೆ 6.5 ಕೆ.ಜಿ ಚಿನ್ನ ಜಪ್ತಿ