ಮುಂಬೈ,ಜೂ.8- ವ್ಯಕ್ತಿಯೊಬ್ಬ ತನ್ನ ಸಹಜೀವನ ಸಂಗಾತಿ ಮಹಿಳೆಯನ್ನು ಕೊಂದು ದೇಹವನ್ನು ತುಂಡುಗಳಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿರುವ ಪ್ರಕರಣ ಥಾಣೆಯಲ್ಲಿ ಬಯಲಾಗಿದೆ.
ಮೃತ ಮಹಿಳೆಯನ್ನು ಸರಸ್ವತಿ ವೈದ್ಯ(32) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು 56 ವರ್ಷದ ಮನೋಜ್ ಸಹಾನಿ ಎಂದು ಗುರುತಿಸಲಾಗಿದೆ.
ನಾಲ್ಕು ದಿನಗಳ ಹಿಂದೆ ಸರಸ್ವತಿಯನ್ನು ಕೊಂದಿದ್ದ ಮನೋಜ್, ಟ್ರೀ ಕಟ್ಟರ್ ಅನ್ನು ಖರೀದಿಸಿ ಆಕೆಯ ದೇಹವನ್ನು 12–13 ತುಂಡು ಮಾಡಿದ್ದ. ಬಳಿಕ, ಬಳಿಕ, ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ, ಹೊರಗೆ ಎಸೆಯುವ ಉದ್ದೇಶದಿಂದ ಪ್ಲಾಸ್ಟಿಕ್ ಪೇಪರ್‌ನಲ್ಲಿ ಸುತ್ತಿ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ದೂರು ಕೇಳಿಬರುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಯಿತು. ಈ ವೇಳೆ, ಮಹಿಳೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿರುವುದು ಕಂಡು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಶಂಕಿತ ವ್ಯಕ್ತಿಯೊಬ್ಬ ಗಲಾಟೆ ಮಾಡಿಕೊಂಡು ಆಕೆಯನ್ನು ಕೊಲೆ ಮಾಡಿದ್ದಾನೆ ಮತ್ತು ಇನ್ನೊಬ್ಬ ಬುಧವಾರ ಸಂಜೆಯವರೆಗೂ ಆಕೆಯ ಮೃತದೇಹವನ್ನು ಮುಚ್ಚಿಡಲು ಸಹಾಯ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಆದರೆ, ಕೊಲೆ ಏಕೆ ಮಾಡಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ” ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
Previous Articleಪೋಪ್ ಫ್ರಾನ್ಸಿಸ್ ಗೆ ಮತ್ತೊಂದು ಆರೋಗ್ಯ ಸಮಸ್ಯೆ
Next Article ಯುವಕರ ಹುಚ್ಚಾಟ- ತಪ್ಪಿದ ಅನಾಹುತ
1 ಟಿಪ್ಪಣಿ
Мультимедийный интегратор Мультимедийный интегратор .