ಕೋಲ್ಕತ್ತಾ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಅಖಾಡಕ್ಕೆ ಭರ್ಜರಿ ರಂಗು ಬಂದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಡೆ ಅಚ್ಚರಿಗೆ ಕಾರಣವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಸವಾಲು ಎಸೆದಿರುವ ಮಮತಾ ಬ್ಯಾನರ್ಜಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಸಣ್ಣ ಅವಕಾಶವನ್ನು ಬಿಡದೆ ಕೇಂದ್ರ ಸರ್ಕಾರ ಬಿಜೆಪಿ ಮತ್ತು ಚುನಾವಣಾ ಆಯೋಗ ಹುಡುಕುತ್ತಿವೆ. ಈ ಬಗ್ಗೆ ಅರಿವು ಇರುವ ಮಮತಾ ಬ್ಯಾನರ್ಜಿ ಅವರು ಅಂತಹ ಒಂದು ಸಣ್ಣ ಅವಕಾಶವನ್ನು ನೀಡದಂತೆ ನೋಡಿಕೊಳ್ಳುತ್ತಿದ್ದಾರೆ.
ಇದರ ಪರಿಣಾಮವಾಗಿ ಅವರು ಪಶ್ಚಿಮ ಬಂಗಾಳ ರಾಜ್ಯ ಆರೋಗ್ಯ ಮಿಷನ್ ಮುಖ್ಯಸ್ಥೆ, ರಾಜ್ಯ ಭೂ ಬಳಕೆ ಮಂಡಳಿ, ಉರ್ದು ಅಕಾಡೆಮಿ ಹಾಗೂ ರಾಜ್ಯ ವನ್ಯಜೀವಿ ಮಂಡಳಿಯ ಅಧ್ಯಕ್ಷೆ ಸೇರಿದಂತೆ ಅವರು ಕಾರ್ಯನಿರ್ವಹಿಸುತ್ತಿದ್ದ ಹಲವಾರು ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಅಷ್ಟೇ ಅಲ್ಲ ಈ ಸಂಬಂಧಚುನಾವಣಾ ಆಯೋಗಕ್ಕೆ ಪತ್ರ ಬರೆದು, ತಾವು ವಿವಿಧ ಸಮಿತಿಗಳಲ್ಲಿ ಹೊಂದಿದ್ದ 23ಕ್ಕೂ ಹೆಚ್ಚು ಹುದ್ದೆಗಳಿಗೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
ಇದಕ್ಕೆ ಪ್ರಮುಖ ಕಾರಣ ಮಮತಾ ಬ್ಯಾನರ್ಜಿ ರವರು ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳು ಲಾಭದಾಯಕ ಹುದ್ದೆ ಎಂಬ ವ್ಯಾಪ್ತಿಗೆ ಬರುತ್ತವೆ ಹೀಗಾಗಿ ಚುನಾವಣೆಯ ಸಮಯದಲ್ಲಿ “ಲಾಭದಾಯಕ ಹುದ್ದೆ” ವಿಚಾರವು ಪ್ರಮುಖ ವಿವಾದವಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಿರುವ ಅವರು ಈ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

