ಬೆಂಗಳೂರು,ಜು.8-ಬಾಂಗ್ಲಾದೇಶದಲ್ಲಿ ಕೊಲೆ ಮಾಡಿ ಪರಾರಿಯಾಗಿ ನಗರದ ಬೊಮ್ಮನಹಳ್ಳಿಗೆ ಬಂದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಾಂಗ್ಲಾ ಪೊಲೀಸರು ಬಂಧಿಸಿದ್ದಾರೆ. ಫೈಜಲ್ ಅಹಮದ್ ಬಂಧಿತ ಆರೋಪಿಯಾಗಿದ್ದಾನೆ. ಉಗ್ರ ಸಂಘಟನೆ ಅಲ್ ಖೈದಾ ಜೊತೆಗೂ ಆರೋಪಿ ಸಂಪರ್ಕ ಹೊಂದಿದ್ದ ಎಂದು ಶಂಕಿಸಲಾಗಿದೆ. ಬಾಂಗ್ಲಾ ಮತ್ತು ಕೋಲ್ಕತ್ತಾ ಪೊಲೀಸರ ವಿಶೇಷ ತಂಡ ಕಾರ್ಯಾಚರಣೆ ನಡೆಸಿ, ಜುಲೈ 1ರಂದು ನಗರದ ಬೊಮ್ಮನಹಳ್ಳಿಯಲ್ಲಿ ಆರೋಪಿಯನ್ನ ಬಂಧಿಸಿದ್ದಾರೆ.
ಕ್ಯಾಬ್ ಚಾಲಕನಾಗಿ ಕೆಲಸ ಮಾಡ್ತಿದ್ದ ಆರೋಪಿ ಫೈಜಲ್ 2015ರ ಮೇ.12ರಂದು ಬಾಂಗ್ಲಾದ ಸಿಲೆಟ್ನಲ್ಲಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ. ಫೈಜಲ್ ಸಹಿತ ನಾಲ್ವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ತಲೆಮರೆಸಿಕೊಂಡಿದ್ದ ಫೈಜಲ್‌ಗಾಗಿ ಬಾಂಗ್ಲಾ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.
ಮದರಸಗಳಿಗೆ ತೆರಳಿ ಜಿಹಾದಿ ಬಗ್ಗೆ ಪ್ರವಚನ ನೀಡ್ತಿದ್ದ ಫೈಜಲ್, ಭಾರತದಲ್ಲಿ ಇರುವ ಬಗ್ಗೆ ಬಾಂಗ್ಲಾ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೋಲ್ಕತ್ತಾ ಪೊಲೀಸರಿಗೆ ಮಾಹಿತಿ ರವಾನಿಸಿದ್ದ ಬಾಂಗ್ಲಾ ಪೊಲೀಸ್ ಅವರ ಸಹಕಾರದಿಂದ ಆರೋಪಿಯನ್ನ ಬಂಧಿಸಿ, ಬಾಂಗ್ಲಾಗೆ ಕರೆದೊಯ್ದಿದ್ದಾರೆ.
Previous Articleಎಫ್ ಎಸ್ ಎಲ್ ವರದಿ ಸಲ್ಲಿಕೆಗೆ ಸಿಐಡಿಗೆ ಹೈಕೋರ್ಟ್ ಆದೇಶ
Next Article ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಇನ್ನಿಲ್ಲ