ಮಂಗಳೂರು,ಜೂ.11-ನಗರದ ಹೊರ ವಲಯದಲ್ಲಿ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ರೌಡಿ ರಾಜಾ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಮುಲ್ಕಿ ಪ್ರದೇಶದ ಬಳಿ ಸಿಸಿಬಿ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
ಮೂಲ್ಕಿ ಠಾಣಾ ವ್ಯಾಪ್ತಿಯ ಗ್ಲೋಬಲ್ ಹೆರಿಟೇಜ್ ಬಡಾವಣೆಯಲ್ಲಿ ಇಂದು ಬೆಳಿಗ್ಗೆ ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಇಬ್ಬರು ಆರೋಪಿಗಳ ಕಾಲಿಗೆ ಮಂಗಳೂರು ಸಿಸಿಬಿ ಪೊಲೀಸರು ಗುಂಡು ಹಾರಿಸಿದ್ದಾರೆ.
ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ, ಮನೋಜ್ ಅಲಿಯಾಸ್ ಬಿಂದಾಸ್ ಮನೋಜ್ ಕಾಲಿಗೆ ಗುಂಡೇಟು ತಗುಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೊದಲು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಲಾಯಿತಾದರೂ ಮತ್ತೆ ಹಲ್ಲೆಗೆ ಮುಂದಾಗಿದ್ದರಿಂದ ಪ್ರಾಣ ರಕ್ಷಣೆಗಾಗಿ ಎರಡು ಸುತ್ತು ಆರೋಪಿಗಳತ್ತ ಗುಂಡು ಹಾರಿಸಿದ್ದು ಅವು ಇಬ್ಬರ ಕಾಲಿಗೆ ತಗುಲಿ ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಬಂಧಿಸಿ ಆಸ್ಪತ್ರೆಗೆ ದಾಖಲಾಗಿದ್ದು ಆರೋಪಿಗಳು ನಡೆಸಿದ ಹಲ್ಲೆಯಿಂದ ಪೊಲೀಸ್ ಸಿಬ್ಬಂದಿಗೂ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಿಸಿಬಿ ನಿರೀಕ್ಷಕ ಮಹೇಶ್ ಪ್ರಸಾದ್ ಅವರು ಮೂರು ಸುತ್ತು ಗುಂಡು ಹಾರಿಸಿದ್ದಾರೆ..
ಪಿಎಸ್ ಐ ನಾಗೇಂದ್ರ, ಎಎಸ್ಐ ಡೇವಿಡ್, ಹೆಡ್ ಕಾನ್ಸ್‌ಟೇಬಲ್ ಸಂತೋಷ್ ಪೂಜಾರಿ ಎಂಬವರಿಗೆ ಗಾಯವಾಗಿದೆ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಗಾಯಗೊಂಡ ಪೊಲೀಸರ ಆರೋಗ್ಯ ವಿಚಾರಿಸಿದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

