ಚಿತ್ರದುರ್ಗ, ಸೆ.3-ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪುರುಷತ್ವ ಪರೀಕ್ಷೆಯಲ್ಲಿ ಸಧೃಡ(ಫಿಟ್) ರಾಗಿದ್ದು ಸದ್ಯ ಜಾಮೀನು ದೊರೆಯುವುದು ಕೂಡ ಕಷ್ಟವಾಗಿದೆ.
ಪೊಲೀಸರು ರಹಸ್ಯ ಸ್ಥಳದಲ್ಲಿ ನಿನ್ನೆ ರಾತ್ರಿಯಿಂದ ಶ್ರೀಗಳನ್ನು ವಿಚಾರಣೆ ನಡೆಸುತ್ತಿರುವ ಬೆನ್ನಲ್ಲೇ ಅವರು ಗಂಡಸ್ತನದಲ್ಲಿ ಫಿಟ್ ಆಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಧೃಢಪಟ್ಟಿದೆ.
ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಶಿವಾಚಾರ್ಯ ಶರಣರ ಪುರುಷತ್ವ ಪರೀಕ್ಷೆ ಮಾಡಿದ್ದು ವರದಿಯಲ್ಲಿ ಶರಣರು ಗಂಡಸತ್ವ ಸಾಬೀತಾಗಿದೆ.
ಶರಣರ ಡಿಎನ್‌ಎ, ರಕ್ತ, ಮೂತ್ರ, ಕೂದಲು ಸೇರಿದಂತೆ ಹಲವು ಸ್ಯಾಂಪಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಪಡೆದಿದ್ದು ಅದರ ಪರೀಕ್ಷೆ ವರದಿ ಬರಬೇಕಿದೆ. ಶಿವಾಚಾರ್ಯರಿಗೆ ನಿನ್ನೆ ಸಂಜೆಯೇ
ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಇಂದು ಬೆಳಗ್ಗೆಯೇ ಈ ಸಂಬಂಧ ವರದಿಯನ್ನು ಕೂಡ ನೀಡಲಾಗಿದೆ.
ಉಳಿದ ಮಾದರಿಗಳನ್ನು ಮಡಿವಾಳದ ಎಫ್‌ಎಸ್‌ಎಲ್‌ಗೆ ರವಾನಿಸಲಾಗಿದೆ. ಈ ಹಿಂದೆ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿ ಪುರುಷನಲ್ಲ ಎಂದು ಅಫಿಡವಿಟ್ ಸಲ್ಲಿಸಿದರೆ ಮಾತ್ರ ಪರೀಕ್ಷೆಗೊಳಪಡಿಸಲಾಗುತ್ತಿತ್ತು. ನಿತ್ಯಾನಂದ ಪ್ರಕರಣದಲ್ಲಿ ಇದೇ ರೀತಿ ಅಫಿಡವಿಟ್ ಸಲ್ಲಿಕೆಯ ನಂತರ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಅಸಾರಾಂ ಬಾಪುವನ್ನು ಕೂಡ ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಆದರೆ ಇತ್ತೀಚಿನ ಪ್ರಕರಣಗಳಲ್ಲಿ, ಕಡ್ಡಾಯವಾಗಿ ಪುರುಷತ್ವ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞ ಡಾ. ಗಿರೀಶ್ ತಿಳಿಸಿದ್ದಾರೆ. ಇದೇ ಕಾರಣಕ್ಕಾಗಿ ಮುರುಘಾ ಶರಣರ ಪುರುಷತ್ವ ಪರೀಕ್ಷೆ ನಡೆಸಲಾಗಿದೆ.
ಜಾಮೀನು ನಿರಾಕರಣೆ:
ಹೇಗಾದರೂ ಮಾಡಿ ಜೈಲು ಪಾಲಾಗುವುದನ್ನು ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ಮುರುಘಾ ಶರಣರು ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದರು.
ಮುರುಘಾ ಮಠದ ಆಪ್ತ ವಕೀಲ ಉಮೇಶ್ ಅವರು ಬೆಳಿಗ್ಗೆ 11 ಗಂಟೆಗೆ ಶ್ರೀಗಳ ಪರವಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು
ಆದರೆ ಪೊಲೀಸ್ ಕಸ್ಟಡಿ ಮುಗಿಯುವ ವರೆಗೂ ಜಾಮೀನು ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದು ನ್ಯಾಯಾಲಯ ನೇರವಾಗಿ ತಿಳಿಸಿದೆ.
ಇದರಿಂದ ಕಾನೂನು ಹೋರಾಟದಲ್ಲಿ ಮುರುಘಾ ಶರಣರಿಗೆ ಮತ್ತೆ ಹಿನ್ನಡೆಯಾಗಿದೆ. ಸೆ.5ಕ್ಕೆ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ಅದರ ನಂತರ ಅರ್ಜಿ ವಿಚಾರಣೆ ನಡೆಸುವುದಾಗ ನ್ಯಾಯಾಲಯ ತಿಳಿಸಿದೆ.
ಪೊಲೀಸ್ ಕಸ್ಟಡಿ ಮುಗಿದ ನಂತರ ಮತ್ತಷ್ಟು ದಿನಗಳ ಕಾಲ ಕಸ್ಟಡಿಗೆ ಪೊಲೀಸರು ಮನವಿ ಮಾಡುವ ಸಾಧ್ಯತೆಯಿದೆ. ಗಂಭೀರ ಪ್ರಕರಣವಾಗಿರುವುದರಿಂದ ನ್ಯಾಯಾಲಯ ಕಸ್ಟಡಿಯನ್ನು ಮುಂದೂಡುವ ಸಾಧ್ಯತೆಯೂ ಇದೆ ಎನ್ನುತ್ತಾರೆ ಕಾನೂನು ತಜ್ಞರು.
ಪೊಲೀಸ್ ಡ್ರಿಲ್:
ಶ್ರೀಗಳ ವಿಚಾರಣೆ ನಡೆಸುವ ಸ್ಥಳ ಗೊತ್ತಾದರೆ ಭಕ್ತರು ಅಭಿಮಾನಿಗಳು ಧಾವಿಸಿ ಗೊಂದಲ ಉಂಟಾಗುವ ಹಿನ್ನೆಲೆಯಲ್ಲಿ ರಹಸ್ಯ ಸ್ಥಳದಲ್ಲಿ ಶ್ರೀಗಳನ್ನು ವಿಚಾರಣೆ ನಡೆಸಿ ಪೊಲೀಸರು ಪ್ರಕರಣದ ಮಾಹಿತಿಯನ್ನು ಸಂಗ್ರಹಿಸ ತೊಡಗಿದ್ದಾರೆ.
ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಖುದ್ದಾಗಿ ನಿನ್ನೆ ಸಂಜೆ ಹಾಜರಾದ ನ್ಯಾಯಾಂಗ ಬಂಧನದಲ್ಲಿದ್ದ ಶರಣರನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಪೊಲೀಸರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ. ಕೋಮಲಾ ಅವರು ಸೆ.5 ರವರೆಗೆ ಪೊಲೀಸ್ ವಶಕ್ಕೆ ನೀಡಿದ್ದರು.
ಶ್ರೀಗಳಿಗೆ ಪ್ರಶ್ನೆ:
ಇದೇ ವೇಳೆ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲು ಕಾರಾಗೃಹದ ಅಧೀಕ್ಷಕರು ಸಿದ್ಧತೆ ನಡೆಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಶ್ರೀಗಳನ್ನು ವಶಕ್ಕೆ ತೆಗೆದುಕೊಂಡು ಡಿವೈಎಸ್‌ಪಿ ಕಚೇರಿಗೆ ಕರೆದೊಯ್ದು ಅಲ್ಲಿಂದ ರಹಸ್ಯ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ಮುಂದುವರೆಸಲಾಗಿದೆ.
Previous Articleಡ್ರಗ್ಸ್ ಚಟಕ್ಕೆ ಬಿದ್ದು ಬಲಿಯಾದವರೆಷ್ಟು ಗೊತ್ತಾ?
Next Article ಶಾಸಕರಿಗಿದೆಯಾ ಈ ಅಧಿಕಾರ?