Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Metro ಪಿಲ್ಲರ್ ದುರಂತಕ್ಕೆ ಯಾರು ಹೊಣೆ?
    ಸುದ್ದಿ

    Metro ಪಿಲ್ಲರ್ ದುರಂತಕ್ಕೆ ಯಾರು ಹೊಣೆ?

    vartha chakraBy vartha chakraಫೆಬ್ರವರಿ 3, 202330 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.3-

    ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಚೌಕಟ್ಟು ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಪ್ರಕರಣ ಸಂಬಂಧ ಗೋವಿಂದಪುರ ಪೊಲೀಸರು ಇಲ್ಲಿಯವರೆಗೆ 7 ಬಿಎಂಆರ್​ಸಿಎಲ್​ (BMRCL) ಅಧಿಕಾರಿಗಳು ಹಾಗೂ 18 ಎನ್​​ಸಿಸಿ ಸಿಬ್ಬಂದಿಗಳಿಗೆ  ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಅವೈಜ್ಞಾನಿಕ ಕಾಮಗಾರಿ, ನಿರ್ಲಕ್ಷ್ಯವನ್ನು ಒಪ್ಪಿಕೊಳ್ಳದ‌ BMRCL ಅಧಿಕಾರಿಗಳು, ಗುತ್ತಿಗೆ ನೀಡಿದ್ದೇವೆ ಇದರಲ್ಲಿ ನಮ್ಮ ಪಾತ್ರ ಇಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇನ್ನು ಗುತ್ತಿಗೆ ಪಡೆದಿರುವ ನಾಗಾರ್ಜುನ ಕನ್​​ಸ್ಟ್ರಕ್ಷನ್​​​​ ಕಂಪನಿ ಬೇರೆಯದೆ ವರಸೆ ತೆಗೆದಿದೆ. ಗುತ್ತಿಗೆ ಕಂಪನಿ ಯೋಜನೆಯಂತೆ ಕಾಮಗಾರಿ ನಡೆಸಿದ್ದೇವೆ ಆದರೆ ನಮ್ಮದೇನು ತಪ್ಪಿಲ್ಲ ಎಂದಿದೆ. ಈ ಮಧ್ಯೆ ಹೈದರಾಬಾದ್​ನ ಐಐಟಿ ತಂಡ ಮತ್ತೊಂದು ತನಿಖಾ ವರದಿಯನ್ನು ಎರಡು ದಿನಗಳಲ್ಲಿ ಪೊಲೀಸರಿಗೆ ನೀಡಲಿದೆ. ಈಗಾಗಲೇ ಹೈದರಾಬಾದ್‌ನ ಐಐಟಿ ತಜ್ಞರ ತಂಡ ಸಲ್ಲಿಸಿರುವ ಒಂದು ವರದಿಯಲ್ಲಿ ದುರಂತಕ್ಕೆ ಪಿಲ್ಲರ್​ನ ಆಸರೆ ವ್ಯವಸ್ಥೆ (Support System) ವೈಫಲ್ಯ ಕಾರಣವಾಗಿದೆ ಎಂದು ತಿಳಿಸಿದೆ.

    ದುರಂತದ ಬಳಿಕ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಜ.18 ರಂದು ವರದಿ ನೀಡಿದ್ದು, ಮೆಟ್ರೋ ಪಿಲ್ಲರ್ ನಿರ್ಮಿಸುವಾಗ ಅದಕ್ಕೆ ರಾಡ್‌, ಇತರೆ ವಸ್ತುಗಳನ್ನು ಬಳಸಿ ಆಸರೆ ( ಸಪೋರ್ಟ್‌) ನೀಡಬೇಕು. ಆದರೆ ಈ ಮೆಟ್ರೋ ಪಿಲ್ಲರ್‌ಗೆ ಸರಿಯಾದ ರೀತಿಯಲ್ಲಿ ಸಪೋರ್ಟ್ ನೀಡಿರಲಿಲ್ಲ. ಹೀಗಾಗಿ ಮೆಟ್ರೋ ಪಿಲ್ಲರ್ ವಾಲಿ ಕೆಲವೇ ಕ್ಷಣಗಳಲ್ಲಿ ನೆಲಕ್ಕೆ ಬಿದ್ದಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಹೈಕೋರ್ಟ್​​ ಸ್ವಯಂ ಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

    ‘ಪ್ರಕರಣದ ಸಂಬಂಧ ಮಾಧ್ಯಮಗಳ ಸುದ್ದಿ ಆಧರಿಸಿ ಸಾರ್ವಜನಿಕರ ಹಿತ ದೃಷ್ಟಿಯಿಂದ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತಿಕೊಂಡಿದ್ದೇವೆ’ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರ ನೇತೃತ್ವದ ಪೀಠ ಹೇಳಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ BMRCL, BBMP ಮತ್ತು ಸಂಬಂಧಪಟ್ಟ ಗುತ್ತಿಗೆದಾರರನ್ನು ಪ್ರತಿವಾದಿಗಳನ್ನಾಗಿಸಲು ಸೂಚನೆ ನೀಡಿದೆ. ‘ಈ ಪ್ರಕರಣವು ಸಾರ್ವಜನಿಕರಲ್ಲಿ ಕಳವಳ ಮತ್ತು ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆ ಮೂಡಿಸುತ್ತದೆ. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಯಾವೆಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿದ್ದೀರಿ? ಮತ್ತು ಟೆಂಡರ್​ ನೀಡುವ ಸಂದರ್ಭದಲ್ಲಿ ಸುರಕ್ಷರತೆಯು ಟೆಂಡರ್​ನ ಭಾಗವಾಗಿರಲಿಲ್ಲವೇ? ಟೆಂಡರ್​ ಸಮಯದಲ್ಲಿ ಸರ್ಕಾರ ಸೂಚಿಸಿದ ಸುರಕ್ಷತಾ ಕ್ರಮಗಳನ್ನು ಗುತ್ತಿಗೆದಾರರು ಪಾಲಿಸಿದ್ದಾರೆಯೇ?’ ಎಂದು ಪ್ರಶ್ನೆ ಮಾಡಿದೆ.

    Bangalore bbmp bmrcl crime m metro metro pillar News ಅಪರಾಧ ಸುದ್ದಿ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleAmrit Paul ವಿರುದ್ಧ 1300 ಪುಟಗಳ charge sheet
    Next Article Software ಉದ್ಯೋಗದ ಆಸೆ ಹುಟ್ಟಿಸಿ ವಂಚಿಸುತ್ತಿದ್ದ ಗ್ಯಾಂಗ್
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • shop-dental.ru ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • MMO Boosting Services ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • canada pharmaceutical online ordering ರಲ್ಲಿ ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe