ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಅಪಘಾತಕ್ಕೊಳಗಾದ ಘಟನೆ ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಸಚಿವ ಕೋಟ ಅವರ ಬೆಂಗಾವಲು ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಬಳಿಕ ಗಾಯಾಳುಗಳನ್ನು ಸಚಿವ ಕೋಟ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಗಾವಲು ವಾಹನದ ಮುಂದೆ ಸಂಚರಿಸುತಿದ್ದ ಲಾರಿ ಸೂಚನೆ ನೀಡದೇ ಪಥ ಬದಲಿಸಿದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.