ಬೆಂಗಳೂರು. ಜೂ.20-ರಷ್ಯಾ ಮತ್ತು ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ಕನ್ನಡಿಗ ನವೀನ್ ಕುಟುಂಬವನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಸಾಂತ್ವನ ಹೇಳಿದರು.
ಕೊಮ್ಮಘಟ್ಟದಲ್ಲಿ ನಡೆದ ಸಾರ್ವಜನಿಕ ಸಮಾವೇಶದ ನಂತರ ಉಕ್ರೇನ್ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸಿಯಾಗಿದ್ದ ನವೀನ್ ಗ್ಯಾನ ಗೌಡರ್ ಅವರ ತಂದೆ ಶೇಖರಪ್ಪ ಗ್ಯಾನಗೌಡರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹಾಗು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿದರು.
ಪ್ರಧಾನಿ ಮೋದಿಯವರು ನವೀನ್ ತಂದೆ, ತಾಯಿ ಮತ್ತು ಸಹೋದರ ಜೊತೆಗೆ ನಾಲ್ಕೈದು ನಿಮಿಷಗಳ ಕಾಲ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ನಂತರ ಮೃತ ವಿದ್ಯಾರ್ಥಿ ನವೀನ್ ತಂದೆ ಶೇಖರಗೌಡ ಮಾಹಿತಿ ನೀಡಿದರು. ನಮ್ಮ ಕಣ್ಣೀರು ನೋಡಿ ಪಿಎಂ ನರೇಂದ್ರ ಮೋದಿ ಅವರು ಭಾವುಕರಾದರು. ಮಗನ ಸಾವಿನ ದುಃಖದಲ್ಲೂ ಮಗನ ದೇಹದಾನ ಮಾಡಿದ್ದಕ್ಕೆ ಪಿಎಂ ಮೆಚ್ಚುಗೆ ವ್ಯಕ್ತಪಡಿಸಿದರು ಎಂದರು.
ನವೀನ್ ಮೃತಪಟ್ಟ ನಂತರ ನಿಮ್ಮ ಭೇಟಿಗೆ ಬರಬೇಕಾಗಿತ್ತು. ಆದರೆ ಈಗ ಕಾಲ ಕೂಡಿ ಬಂತು. ನವೀನ್ ಸಹೋದರ ಹರ್ಷ ಕೂಡ ಪ್ರತಿಭಾವಂತನದಾಗಿದ್ದಾನೆ ಎಂದರು.
ಉಕ್ರೇನ್ನಿಂದ ಬಂದ ಎಂಬಿಬಿಎಸ್ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ವ್ಯವಸ್ಥೆ ಮಾಡುವಂತೆ ಕೇಳಿದೆವು. ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು. ನಮಗೆ ಧೈರ್ಯವಾಗಿ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಧೈರ್ಯ ತುಂಬಿದರು ಎಂದು ತಿಳಿಸಿದರು.
Previous Articleಬೇಸ್ ವಿವಿ ಕ್ಯಾಂಪಸ್ ಲೋಕಾರ್ಪಣೆ ಮಾಡಿದ ಮೋದಿ
Next Article Shopping ಮಾಡುವಾಗ Arrest