ಬೆಳಗಾವಿ, ಜ.7- ಪ್ರೇಮಿಗಳೆಂದು ಭಾವಿಸಿ ಅಣ್ಣ-ತಂಗಿಯ ಮೇಲೆ ಅನ್ಯಕೋಮಿನ ಯುವಕರು ನೈತಿಕ ಪೊಲೀಸಗಿರಿ (Moral Policing) ನಡೆಸಿರುವ ಘಟನೆ ಕೋಟೆ ಕರೆ ಆವರಣದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ನಿವಾಸಿಗಳಾದ 24 ವರ್ಷದ ಯುವತಿ, 21 ವರ್ಷದ ಯುವಕ ಯುವನಿಧಿ ಅರ್ಜಿ ಸಲ್ಲಿಸಲು ಬಂದಿದ್ದರು.
ಯುವತಿ ಮುಖಕ್ಕೆ ಬಟ್ಟೆ ಕಟ್ಟಿದ್ದಳು, ಯುವಕ ಹಣೆಗೆ ತಿಲಕ ಇಟ್ಟುಕೊಂಡಿದ್ದನು. ಇವರನ್ನು ಕಂಡ ಅನ್ಯಕೋಮಿನ 16 ಮಂದಿ ಯುವಕರ ಗ್ಯಾಂಗ್ ಹಿಂದೂ ಯುವಕ, ಮುಸ್ಲಿಂ ಯುವತಿ ಪ್ರೇಮಿಗಳೆಂದು ಥಳಿಸಿ ಹತ್ತಿರವೊಂದರ ಕೊಠಡಿಯಲ್ಲಿ 2-3 ಗಂಟೆಗಳ ಕಾಲ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾರೆ.
ಬಳಿಕ ಯುವತಿ ಮೊಬೈಲ್ ನಿಂದ ಕುಟುಂಬಸ್ಥರಿಗೆ ಕರೆ ಮಾಡಿದ್ದಾರೆ. ಆಗ ಕುಟುಂಬಸ್ಥರು ಅವರಿಬ್ಬರು ಸಹೋದರಿ, ಸಹೋದರರು ಅಂತ ಹೇಳಿದರೂ ನಂಬದೆ, ಮೊಬೈಲ್ ಸ್ವೀಚ್ ಆಫ್ ಮಾಡಿ ಮತ್ತೆ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಯುವಕ ಮತ್ತು ಯುವತಿ ತಾವು ಸಹೋದರಿ, ಸಹೋದರ ಅಂತಾ ಹೇಳಿದರೂ ದುಷ್ಕರ್ಮಿಗಳು ನಂಬಿಲ್ಲ.
ಕೂಡಲೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮೊಬೈಲ್ ಲೋಕೇಶ್ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ. 16 ಜನರಲ್ಲಿ ಓರ್ವ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಭೀರ ಗಾಯಗೊಂಡ ಯುವತಿ ಮತ್ತು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮಾರ್ಕೆಟ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇನ್ನು ಯುವತಿಯ ತಾಯಿ ಹಿಂದೂ, ತಂದೆ ಮುಸ್ಲಿಂ ಆಗಿದ್ದು, ಇಬ್ಬರು ಪ್ರೀತಿಸಿ ಮದುವೆ ಆಗಿದ್ದಾರೆ. ಯುವತಿ ತನ್ನ ಚಿಕ್ಕಮ್ಮನ ಮಗನ ಜತೆಗೆ ಅರ್ಜಿ ಹಾಕಲು ಹೋದ ವೇಳೆ ಘಟನೆ ನಡೆದಿದೆ.
2 ಪ್ರತಿಕ್ರಿಯೆಗಳು
Легальная покупка диплома ВУЗа с сокращенной программой обучения
купить диплом в твери