Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » MSIL ಟೂರ್ ಪ್ಯಾಕೇಜ್ ಇದೆ ನೋಡಿ
    ಸಂಚಾರ

    MSIL ಟೂರ್ ಪ್ಯಾಕೇಜ್ ಇದೆ ನೋಡಿ

    vartha chakraBy vartha chakraಜನವರಿ 8, 202543 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಮಾರಾಟ ಚಿಟ್ ಫಂಡ್ ಮತ್ತು ವಿತರಣೆಯಲ್ಲಿ ಹೆಸರು ಮಾಡಿರುವ ಸರಕಾರಿ ಸ್ವಾಮ್ಯದ ಎಂಎಸ್‌ ಐಎಲ್‌ ಸಂಸ್ಥೆ ಇದೀಗ ಪ್ರವಾಸೋದ್ಯಮ ಕ್ಷೇತ್ರಕ್ಕೂ ಕಾಲಿಟ್ಟಿದೆ
    ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸ್ವದೇಶಿ ಮತ್ತು ವಿದೇಶಿ ಆಕರ್ಷಕ ಟೂರ್‌ ಪ್ಯಾಕೇಜ್ ಸಿದ್ದಪಡಿಸಿದೆ
    ಎಂ ಎಸ್ ಎ ಎಲ್ ಸಿದ್ದಪಡಿಸಿರುವ ಟೂರ್ ಪ್ಯಾಕೇಜ್ ಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಚಾಲನೆ ನೀಡಿದರು.
    ಈ ವೇಳೆ ಮಾತನಾಡಿದ ಅವರು, ʻಎಂಎಸ್‌ ಐಎಲ್‌ ಮೊದಲಿನಿಂದಲೂ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಗೆ ಹೆಸರಾಗಿದೆ. ಈಗ ಟೂರ್‌ ಪ್ಯಾಕೇಜುಗಳ ಮೂಲಕ ಸಂಸ್ಥೆಯು ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಈ ಪ್ಯಾಕೇಜುಗಳ ಅಡಿಯಲ್ಲಿ‌ ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಆದಿಕೈಲಾಸ ಮತ್ತು ವಾರಣಾಸಿಗೆ ಪ್ರವಾಸ ಆಯೋಜಿಸಲಾಗುವುದು. ಮುಖ್ಯವಾಗಿ ನಾವು ಆಫ್-ಲೈನ್‌ ಪ್ರವಾಸಿಗರಿಗೆ ಆದ್ಯತೆ ಕೊಡುತ್ತಿದ್ದೇವೆ,ʼ ಎಂದಿದ್ದಾರೆ.
    ಈ ಪ್ಯಾಕೇಜುಗಳಲ್ಲಿ ಸುರಕ್ಷತೆ, ಶುಚಿರುಚಿಯಾದ ಆಹಾರ, ಮನೆ ಬಾಗಿಲಿನಿಂದಲೇ ಕರೆದುಕೊಂಡು ಹೋಗಿ ವಾಪಸ್‌ ಅಲ್ಲಿಗೇ ಬಿಡುವುದು, ಸಹಾಯಕರ ನೆರವು, ಮಾಸಿಕ ಕಂತುಗಳಲ್ಲಿ ಹಣ ಪಾವತಿ, ಲಕ್ಕಿ ಡ್ರಾ, ಕೈಗೆಟುಕುವ ವೆಚ್ಚದಲ್ಲಿ ಉತ್ತರ ಭಾರತ ಪ್ರವಾಸ ಮುಂತಾದ ಸೌಲಭ್ಯ ಮತ್ತು ಆಕರ್ಷಣೆಗಳಿವೆ. ಗುಂಪು ಪ್ರವಾಸ ಮಾಡಲು ಬಯಸುವವರಿಗೆ ಪ್ರತಿ ಬ್ಯಾಚಿನಲ್ಲಿ ಗರಿಷ್ಠ 100 ಮಂದಿಗೆ ಅವಕಾಶ ಇರಲಿದೆ ಎಂದು ಅವರು ಮಾಹಿತಿ ನೀಡಿದರು.
    ಇದಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆಂದು ʻಸ್ಟಡಿ-ಕಂ-ಪ್ಲೆಷರ್‌ ಟೂರ್)‌, ಇಕೋ ಟೂರಿಸಂ ಮತ್ತು ಕರಾವಳಿ ಪ್ರದೇಶಗಳ ವೀಕ್ಷಣೆ ಇರುವ ಕೋಸ್ಟಲ್‌ ಟೂರಿಸಂ ಮುಂತಾದ ಪ್ಯಾಕೇಜುಗಳನ್ನು ರೂಪಿಸಲು ಎಂಎಸ್‌ ಐಎಲ್‌ ಚಿಂತಿಸುತ್ತಿದೆ. ಸಂಸ್ಥೆಯು ಸದ್ಯಕ್ಕೆ ರೂಪಿಸಿರುವ ಪ್ಯಾಕೇಜಿನಲ್ಲಿ ಕೇವಲ 20 ಸಾವಿರ ರೂ. ವೆಚ್ಚದಲ್ಲಿ 15ರಿಂದ 18 ದಿನಗಳ ಉತ್ತರ ಭಾರತ ಪ್ರವಾಸ ಮಾಡಿಕೊಂಡು ಬರಬಹುದು ಎಂದು ವಿವರಿಸಿದರು
    ಸರಕಾರಿ ಉದ್ಯೋಗಿಗಳನ್ನು ಗಮನದಲ್ಲಿ ಇಟ್ಟುಕೊಂಡು ಮಾಡಿರುವ ಪ್ಯಾಕೇಜಿನಲ್ಲಿ ಮೊದಲು ಶೇ.50ರಷ್ಟು ಹಣ ಪಾವತಿಸಿ, ಪ್ರವಾಸ ಕೈಗೊಳ್ಳಬಹುದು. ಪ್ರವಾಸ ಮುಗಿಸಿಕೊಂಡು ಬಂದ ಬಳಿಕ ಉಳಿದ ಶೇ.50ರಷ್ಟು ಹಣವನ್ನು ಮಾಸಿಕ ಕಂತುಗಳಲ್ಲಿ ಕಟ್ಟಬಹುದು. ಹಾಗೆಯೇ ಲಕ್ಕಿ ಡ್ರಾದಲ್ಲಿ ವಿಜೇತರಾಗುವ ಅದೃಷ್ಟಶಾಲಿಗಳು ಡ್ರಾ ನಂತರದ ಹಣವನ್ನು ಪಾವತಿಸಬೇಕಾಗಿಲ್ಲ. ಈ ಎಲ್ಲ ಪ್ಯಾಕೇಜುಗಳಲ್ಲೂ ಎಂಎಸ್‌ ಐಎಲ್‌ ವತಿಯಿಂದ ಟೂರ್‌ ಮ್ಯಾನೇಜರ್‌ ಅಥವಾ ಸಹಾಯಕರೊಬ್ಬರು ಜತೆಗಿರಲಿದ್ದು, ಪ್ರವಾಸಿಗರ ಬೇಕು-ಬೇಡಗಳನ್ನು ಆಲಿಸಿ, ನೆರವು ನೀಡಲಿದ್ದಾರೆ ಎಂದರು. .
    ಪ್ರವಾಸಿಗರಿಗೆ ಆದಷ್ಟು ಕಡಿಮೆ ವೆಚ್ಚದಲ್ಲಿ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಸಾಧ್ಯವಾಗಬೇಕು ಎನ್ನುವ ಆಶಯದೊಂದಿಗೆ ಎಂಎಸ್‌ ಐಎಲ್‌ ಮೂಲಕ ಈ ಹೆಜ್ಜೆ ಇಡಲಾಗುತ್ತಿದೆ. ಖಾಸಗಿ ಸಂಸ್ಥೆಗಳ ದರಕ್ಕೆ ಹೋಲಿಸಿದರೆ ನಾವು ನಿಗದಿ ಪಡಿಸಿರುವ ದರ ತುಂಬಾ ಕಡಿಮೆ ಇದೆ. ಹಾಗೆಯೇ ಪ್ರತಿಯೊಂದು ಸೇವೆಯನ್ನೂ ಗುಣಮಟ್ಟದೊಂದಿಗೆ ಒದಗಿಸಲಾಗುವುದು ಎಂದು ಪಾಟೀಲ ಹೇಳಿದ್ದಾರೆ.
    ಕಾರ್ಯಕ್ರಮದಲ್ಲಿ ಎಂಎಸ್ಐಎಲ್‌ ಅಧ್ಯಕ್ಷ ಪುಟ್ಟರಂಗಶೆಟ್ಟಿ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ವಾಣಿಜ್ಯ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಎಂಎಸ್ಐಎಲ್ ನಿರ್ದೇಶಕ ಚಂದ್ರಪ್ಪ, ಪ್ರವಾಸ ವಿಭಾಗದ ಮುಖ್ಯಸ್ಥ ರವಿಕುಮಾರ್ ಮುಂತಾದವರು ಭಾಗವಹಿಸಿದ್ದರು.‌
    ಎಲ್ಲೆಲ್ಲಿಗೆ ಪ್ರವಾಸ ಪ್ಯಾಕೇಜು?
    ಎಂಎಸ್‌ ಐಎಲ್‌ ಸಂಸ್ಥೆಯ ಟೂರ್ಸ್‌ ಅಂಡ್‌ ಟ್ರಾವೆಲ್ಸ್‌ ವಿಭಾಗವು ಈ ಟೂರ್‌ ಪ್ಯಾಕೇಜುಗಳನ್ನು ನಿರ್ವಹಿಸಲಿದೆ. ಇದರಡಿಯಲ್ಲಿ ಕಾಶಿ, ಅಯೋಧ್ಯೆ, ಪುರಿ, ಆದಿ ಕೈಲಾಸ ಮುಂತಾದ ಧಾರ್ಮಿಕ ಮತ್ತು ಐತಿಹಾಸಿಕ ತಾಣಗಳಿಗೆ ಪ್ರವಾಸಿಗರನ್ನು ಅದು ಕರೆದೊಯ್ಯಲಿದೆ. ಜೊತೆಗೆ ದುಬೈ, ಸಿಂಗಪುರ್‌, ವಿಯಟ್ನಾಂ, ಶ್ರೀಲಂಕಾ, ನೇಪಾಳ, ಥಾಯ್ಲೆಂಡ್‌ ಮತ್ತು ಯೂರೋಪಿನ ಹಲವು ದೇಶಗಳಿಗೂ ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜುಗಳನ್ನು ರೂಪಿಸಿದೆ. ಈ ಪ್ರವಾಸಗಳಿಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಸಾರ್ವಜನಿಕರು ಮಾಹಿತಿ ಪಡೆದುಕೊಳ್ಳಬಹುದು.
    24/7 ಸಹಾಯವಾಣಿ
    ಪ್ರವಾಸಿಗರ ಅನುಕೂಲಕ್ಕೆ ಎಂಎಸ್‌ ಐಎಲ್‌ 24/7 ಸಹಾಯವಾಣಿ ಮತ್ತು ವಾಟ್ಸ್ಯಾಪ್‌ ಸೌಲಭ್ಯವನ್ನೂ (080-45888882, 9353645921) ಹೊಂದಿದೆ. ಇದರ ನಿರ್ವಹಣೆಗಾಗಿ ಪ್ರತ್ಯೇಕ ತಂಡವೇ ಇರಲಿದೆ. ಒಂದು ನಂಬರಿನಲ್ಲಿ ಯಾರಾದರೂ ಮಾತನಾಡುತ್ತಿದ್ದರೆ, ಅದು ತಾನಾಗಿಯೇ ಮತ್ತೊಂದು ಸಂಖ್ಯೆಗೆ ಸಂಪರ್ಕ ಕಲ್ಪಿಸುವ ಕ್ಲೌಡ್‌ ಬೇಸ್ಡ್‌ ಟೆಲಿಕಾಂ ಸಿಸ್ಟಮ್‌ ಅನ್ನು ಅಳವಡಿಸಿಕೊಳ್ಳಲಾಗಿದೆ

    Verbattle
    Verbattle
    Verbattle
    m ಕಾಲೇಜು ಧಾರ್ಮಿಕ ಬೆಂಗಳೂರು ವಾಣಿಜ್ಯ ವಿದ್ಯಾ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಭ್ರಷ್ಟರ ಬೆವರು ಹರಿಸಿದ ಲೋಕಾಯುಕ್ತ
    Next Article ಮಂಡ್ಯದಲ್ಲಿ ರೆಬಲ್ ಲೇಡಿ ಸಂಚಲನ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Daviddek ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • AU88 ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.