ಖ್ಯಾತ ನಟ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಜನತಾ ಪರಿವಾರದ ಮೂಲಕ ಸಕ್ರಿಯ ರಾಜಕಾರಣ ಪ್ರವೇಶಿಸಿದ್ದ ಅವರು ಒಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದರು ನಂತರ ಬಿಜೆಪಿ ಸೇರಿದ ಅವರು ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.
ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ ಇವರು ನಂತರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು ಬಳಿಕ ಕಾಂಗ್ರೆಸ್ ಸೇರಿದ್ದರು, ಕಾಂಗ್ರೆಸ್ ನಲ್ಲಿ ಉನ್ನತ ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರಿಗೆ ಸಾಂಸ್ಕೃತಿಕ ಘಟಕದ ಜವಾಬ್ದಾರಿ ನೀಡಲಾಗಿತ್ತು ಈ ಬಗ್ಗೆ ಬೇಸರದಲ್ಲಿದ್ದ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವ ಭರವಸೆ ನೀಡಲಾಗಿತ್ತು. ಆದರೆ ಯಾವುದೇ ಜವಾಬ್ದಾರಿ ನೀಡದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ತೊರೆದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಅವರು ಎಲ್ಲಾ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
Previous ArticleAirport ಪರದೆ ಮೇಲೆ Porn ಚಿತ್ರ!
Next Article ಈಜಲು ಹೋದ ವಿದ್ಯಾರ್ಥಿ ಕೆರೆಪಾಲು