ಬೆಂಗಳೂರು,ಅ.16-
ಅತ್ಯಾಚಾರ ಹನಿಟ್ರ್ಯಾಪ್ ಷಡ್ಯಂತ್ರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಹಾಗೂ
ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಅತ್ಯಾಚಾರ ಎಸಗಿದ ಆರೋಪ ಪ್ರಕರಣದಡಿ ಕಳೆದ ಸೆ.21ರಂದು ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. ವಿಚಾರಣೆಯ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಸಂಬಂಧ ಸಲ್ಲಿಸಿದ್ದ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಮಂಗಳವಾರಕ್ಕೆ ಕಾಯ್ದಿರಿಸಿತ್ತು.
ಮಂಗಳವಾರ ಆದೇಶ ಹೊರಡಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮುನಿರತ್ನಗೆ ಜಾಮೀನು ನೀಡಿದೆ. ಆದೇಶದ ಪ್ರತಿಯನ್ನು ಸಂಜೆ 6 ಗಂಟೆಯೊಳಗೆ ಜೈಲಾಧಿಕಾರಿಗಳು ತಲುಪಿಸಿದರೆ ಇಂದು ಬಿಡುಗಡೆಯಾಗುವ ಸಾಧ್ಯತೆಯಿದೆ. ಒಂದು ವೇಳೆ ಆದೇಶ ತಲುಪಿಸಲು ಸಾಧ್ಯವಾಗದಿದ್ದರೆ ನಾಳೆ ಮುನಿರತ್ನ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಅತ್ಯಾಚಾರ ಪ್ರಕರಣದ ಇತರೆ ಆರೋಪಿಗಳಾದ ರೋಹಿತ್, ಕಿರಣ್ ಹಾಗೂ ಮಂಜುನಾಥ್ ಎಂಬವರಿಗೆ ನ್ಯಾಯಾಲಯ ಸೋಮವಾರ ನಿರೀಕ್ಷಣಾ ಜಾಮೀನು ನೀಡಿತ್ತು.
Previous Articleಕರ್ನಾಟಕದ ಬೈ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್
Next Article ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು.