Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಸ್ಲಿಂ ಗೂಂಡಾಗಳೇ ಎಚ್ಚರ…!!
    ಸುದ್ದಿ

    ಮುಸ್ಲಿಂ ಗೂಂಡಾಗಳೇ ಎಚ್ಚರ…!!

    vartha chakraBy vartha chakraಆಗಷ್ಟ್ 17, 2022Updated:ಆಗಷ್ಟ್ 17, 20221 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.16– ರಾಜ್ಯದಲ್ಲಿ ಹಿಂದೂ ಸಮಾಜ ಮೇಲೆದ್ದರೆ ಮುಸ್ಲಿಂ ಗೂಂಡಾಗಳು ಉಳಿಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಎಚ್ಚರಿಕೆ ನೀಡಿದರು.
    ನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶಿವಮೊಗ್ಗದ ಬೆಳವಣಿಗೆಗಳನ್ನು ವಿವರಿಸಿ ಚರ್ಚೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು
    ನಾನು ಎಲ್ಲ ಮುಸ್ಲಿಮರನ್ನು ಗೂಂಡಾಗಳು ಎಂದು ಹೇಳುವುದಿಲ್ಲ. ಆದರೆ ಯಾರೋ ನಾಲ್ಕೈದು ದುಷ್ಕರ್ಮಿಗಳು ಮಾಡುತ್ತಿರುವ ಕೆಲಸವನ್ನು ಸಮಾಜ ಖಂಡಿಸಬೇಕಿತ್ತು. ಆ ಕೆಲಸವನ್ನು ಮುಸ್ಲಿಂ ಸಮಾಜದ ಪ್ರಮುಖರು ಮಾಡಬೇಕು ಎಂದು ಆಗ್ರಹಿಸಿದರು.
    ಪ್ರತಿಪಕ್ಷಗಳು ಹಿಂದೂ-ಮುಸ್ಲಿಂ ಗಲಭೆ ತಂದು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿವೆ. ಇದು ಎಂದಿಗೂ ಈಡೇರುವುದಿಲ್ಲ. ಶಿವಮೊಗ್ಗದಲ್ಲಿ ಸ್ಥಳೀಯ ಹಿಂದೂ-ಮುಸ್ಲಿಮರು ಅಣ್ಣ- ತಮ್ಮಂದಿರಂತೆ ಬಾಳುತ್ತಿದ್ದಾರೆ.ಆದರೆ ಕೇರಳ ಮತ್ತು ಇತರ ರಾಜ್ಯಗಳಿಂದ ಬರುವ ಎಸ್​ಡಿಪಿಐ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರು ಗಲಭೆ ಹಬ್ಬಿಸಲು ಯತ್ನಿಸುತ್ತಿದ್ದಾರೆ. ಇದು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಹೇಳಿದರು.
    ಶಿವಮೊಗ್ಗ ಗಲಭೆಗೆ ಕಾಂಗ್ರೆಸ್​ ಕಾರ್ಪೊರೇಟರ್​ ಪತಿಯೇ ಕಾರಣ. ಬಿಜೆಪಿ ಮೇಲೆ ಅರೋಪ ಮಾಡುವ ಮೊದಲು ಕಾಂಗ್ರೆಸ್ ಪಕ್ಷ ಇಂಥವರ ಮೇಲೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
    ಪ್ರತಿಪಕ್ಷಗಳು ಹಿಂದೂ-ಮುಸ್ಲಿಂ ಗಲಭೆ ತಂದು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿವೆ. ಇದು ಎಂದಿಗೂ ಈಡೇರುವುದಿಲ್ಲ. ಶಿವಮೊಗ್ಗದಲ್ಲಿ ಸ್ಥಳೀಯ ಹಿಂದೂ-ಮುಸ್ಲಿಮರು ಅಣ್ಣತಮ್ಮಂದಿರಂತೆ ಬಾಳುತ್ತಿದ್ದಾರೆ. ಆದರೆ ಕೇರಳ ಮತ್ತು ಇತರ ರಾಜ್ಯಗಳಿಂದ ಬರುವ ಎಸ್​ಡಿಪಿಐ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರು ಗಲಭೆ ಹಬ್ಬಿಸಲು ಯತ್ನಿಸುತ್ತಿದ್ದಾರೆ. ಇದು ಎಂದಿಗೂ ಯಶಸ್ವಿಯಾಗುವುದಿಲ್ಲ. ಶಿವಮೊಗ್ಗ ಗಲಭೆಗೆ ಕಾಂಗ್ರೆಸ್​ ಕಾರ್ಪೊರೇಟರ್​ ಪತಿಯೇ ಕಾರಣರಾಗಿದ್ದಾರೆ. ಬಿಜೆಪಿ ಮೇಲೆ ಅರೋಪ ಮಾಡುವ ಮೊದಲು ಕಾಂಗ್ರೆಸ್ ಪಕ್ಷ ಇಂಥವರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
    ಶಿವಮೊಗ್ಗ ನಗರದಲ್ಲಿ ಸರ್ಕಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವೂ ಯಶಸ್ವಿಯಾಗಿತ್ತು. ನಂತರ ನಡೆದ ಬಿಜೆಪಿಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿಯೂ ಸಾಕಷ್ಟು ಜನರು ಸೇರಿದ್ದರು. ಕಾರ್ಯಕ್ರಮ ಮುಗಿದ ಮೇಲೆ ಎಲ್ಲರೂ ಮನೆಗಳಿಗೆ ಹೋದೆವು. ಅಷ್ಟರೊಳಗೆ ಕೆಲ ಕಿಡಿಗೇಡಿಗಳು ಸಾರ್ವಕರ್ ಪೋಟೊ ಹರಿದು ಹಾಕಿದ್ದರು. ಎಸ್​ಡಿಪಿಐ ಕಾರ್ಯಕರ್ತರ ಈ ಕೃತ್ಯದಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನೆಲೆಗೊಂಡಿತು ಎಂದು ಹೇಳಿದರು.
    ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ ಪ್ರೇಮಸಿಂಗ್ ಹಾಗೂ ಶರವಣ ಹೋಗುತ್ತಿರುವಾಗ ಸುಮಾರು ಆರು ಮಂದಿ ಮುಸ್ಲಿಂ ಗುಂಡಾಗಳು ಪ್ರೇಮ್ ಸಿಂಸ್​ಗೆ ಚಾಕು ಹಾಕಿದರು. ಅವರ ನರಗಳು ಘಾಸಿಯಾಗಿರುವುದರಿಂದ ಉಳಿಯುವುದು ಕಷ್ಟ ಎನ್ನುತ್ತಿದ್ದಾರೆ. ಪೊಲೀಸರು ಬಹಳ ಶ್ರಮದಿಂದ ಅಪರಾಧಿಗಳನ್ನು ಹುಡುಕುತ್ತಿದ್ದಾರೆ. ಈ ವೇಳೆ ಒಬ್ಬನ ಮೇಲೆ ಗುಂಡು ಹಾರಿಸಿ, ಇಬ್ಬರನ್ನು ಬಂಧಿಸಿದ್ದಾರೆ ಎಂದು ವಿವರಿಸಿದರು.
    ರಾಜ್ಯದಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿರುವ ಎಸ್​ಡಿಪಿಐ ಸಂಘಟನೆಯ ಮನೋಭಾವ ಇಂದಿಗೂ ಬದಲಾಗಿಲ್ಲ. ಹಿಂದೂಗಳನ್ನ ಕೊಲೆ ಮಾಡುವ ಮನಸ್ಥಿತಿಗೆ ಅವರು ಬಂದಿದ್ದಾರೆ. ನಮ್ಮ ಶಿವಮೊಗ್ಗದವರು ಶಾಂತಿಪ್ರಿಯರು. ಅಲ್ಲಿನ ಸ್ಥಳೀಯರ ಮುಸ್ಲಿಮರ ಬಗ್ಗೆ ನಮಗೆ ಆಕ್ಷೇಪವಿಲ್ಲ. ಆದರೆ ಕೊಲೆ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನ ಮಾಡುವ ಪ್ರಕರಣಗಳು ಎಲ್ಲಿಯೂ ಆಗಬಾರದು ಎಂದು ಒತ್ತಾಯಿಸಿದರು.
    ಇಂಥ ಸಂದರ್ಭದಲ್ಲಿ ಸರ್ಕಾರ ಹೇಗೆ ವರ್ತಿಸಲಿದೆ ಎಂದು ಪೊಲೀಸರು ನಿನ್ನೆ ಒಂದು ಉದಾಹರಣೆ ತೋರಿಸಿದ್ದಾರೆ. ಮುಸ್ಲಿಮ್ ಸಮಾಜದ ಪ್ರಮುಖರು ತಮ್ಮ ಸಮುದಾಯದ ಯುವಕರಿಗೆ ಬುದ್ಧಿ ಹೇಳಬೇಕು. ಈ ಘಟನೆಗೆ ಮುಖ್ಯ ಕಾರಣವಾಗಿರುವ ಎಸ್​ಡಿಪಿಐ ಕಾರ್ಯಕರ್ತ ಶಿವಮೊಗ್ಗದ ಕಾಂಗ್ರೆಸ್ ಪಾಲಿಕೆ ಸದಸ್ಯೆಯ ಪತಿ. ಶಿವಮೊಗ್ಗ ಗಲಭೆಯ ಹಿಂದೆ ಕಾಂಗ್ರೆಸ್ ಇದೆ ಎಂದು ನೇರವಾಗಿ ಆರೋಪ ಮಾಡಿದರು.
    ಗಣಪತಿ ಉತ್ಸವದ ವೇಳೆ ರಾಜ್ಯದಲ್ಲಿ ಎಲ್ಲಿಯೇ ಗಲಭೆ ನಡೆದರೂ, ಮುಸ್ಲಿಮರು ಹಿಂದೂಗಳ ಆಚರಣೆಗೆ ಅಡ್ಡಿಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಈಶ್ವರಪ್ಪ ಎಚ್ಚರಿಸಿದರು. ‘ನೀವು ನಿಮ್ ಹಬ್ಬ ಮಾಡಲ್ವಾ? ನಾವು ಬೆಂಬಲ ಕೊಡಲ್ವಾ? ನಮ್‌ ಹಬ್ಬದ ತಂಟೆಗೆ ಬರಬೇಡಿ’ ಎಂದು ತಾಕೀತು ಮಾಡಿದರು.

    Verbattle
    Verbattle
    Verbattle
    Bangalore Politics ಈಶ್ವರಪ್ಪ ಕಾಂಗ್ರೆಸ್ ಕೊಲೆ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ
    Next Article ಗುಜರಾತ್ ನಲ್ಲಿ ಡ್ರಗ್ಸ್ Factory ಪತ್ತೆ..
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mamak24_liPa ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • EdwardBlivy ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Walterfak ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.