ಬೆಂಗಳೂರು, ಅ 21- ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದೃಷ್ಠಿಯಿಂದ ದ್ವೇಷಕ್ಕೆ ಕಾರಣವಾಗುವ ಸುಳ್ಳು ಸುದ್ದಿಗಳನ್ನು ಸೃಷ್ಟಿಸಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಹುತಾತ್ಮ ಪೊಲೀಸರಿಗೆ ಪುಷ್ಪ ನಮನ ಸಲ್ಲಿಸಿಮಾತನಾಡಿದ ಅವರು ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ ಅಭಿವೃದ್ಧಿಗೆ ಮಾರಕವಾಗಿವೆ ಇದರಿಂದ ಸೃಷ್ಟಿಯಾಗುವ ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ.ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದ್ದು ಇದರ ವಿರುದ್ಧ ವಿಶೇಷ ವಿಭಾಗ ರಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು.
ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎನ್ನುವ ಸೂಚನೆ ನೀಡಿದರು.
ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದರು.
ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಪೊಲೀಸ್ ವ್ಯವಸ್ಥೆ ರಾಜ್ಯದ , ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ.
ವಸತಿ ಗೃಹ ನಿರ್ಮಾಣ:
2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ.
ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ ಎಂದರು.
189 ಮಂದಿ ಪೊಲೀಸ್ ಹುತಾತ್ಮ:
ದೇಶದಲ್ಲಿ ರಾಜ್ಯ ಪೊಲೀಸ್ ಇಲಾಖೆ ಉತ್ತಮ ಹೆಸರು ಪಡೆದಿದ್ದು,ಪೊಲೀಸ್ ಕಾನೂನು ಸುವ್ಯವಸ್ಥೆ ಕಾಪಾಡುವವರು. ಕೆಲಸ ಮಾಡುವಾಗ ಅನೇಕ ಅಪಾಯ ಎದುರಿಸುತ್ತಾರೆ. ಈ ವೇಳೆ ಪ್ರಾಣವನ್ನೂ ಕಳೆದುಕೊಳ್ಳುತ್ತಾರೆ.
ದೇಶದಲ್ಲಿ ಕಳೆದ ಸೆಪ್ಟೆಂಬರ್ 22ರಿಂದ ಆಗಸ್ಟ್ 23 ರವರೆಗೆ ಸುಮಾರು 189 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 16 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರೆಲ್ಲರಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದರು.
ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್,ಡಿಜಿಪಿಗಳಾದ ಕಮಲ್ ಪಂತ್ ,ಪ್ರತಾಪ್ ರೆಡ್ಡಿ,ಗುಪ್ತದಳದ ನಿರ್ದೇಶಕ ಶರತ್ ಚಂದ್ರ ನಗರ ಪೊಲೀಸ್ ಆಯುಕ್ತ ದಯಾನಂದ, ಸೇರಿ ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.
23 ಪ್ರತಿಕ್ರಿಯೆಗಳು
купить аккаунт безопасная сделка аккаунтов
перепродажа аккаунтов услуги по продаже аккаунтов
Account exchange Account Trading Service
Account Catalog https://socialaccountsmarket2025.com
Marketplace for Ready-Made Accounts Marketplace for Ready-Made Accounts
Account exchange Account market
Ready-Made Accounts for Sale Purchase Ready-Made Accounts
buy accounts sell accounts
sell pre-made account accounts marketplace
sell pre-made account accounts marketplace
account market account store
account selling service account buying service
account exchange service account marketplace
account selling service social media account marketplace
find accounts for sale buy pre-made account
guaranteed accounts verified accounts for sale
account sale marketplace for ready-made accounts
account market account market
account buying service account acquisition
account acquisition ready-made accounts for sale
secure account purchasing platform buy account
buy account online account store
account store find accounts for sale