ಬೆಂಗಳೂರು.ಜ,6: ಅಂಗಡಿ ಮುಂಗಟ್ಟು ವಾಣಿಜ್ಯ ಸಂಕೀರ್ಣ ಮತ್ತು ಖಾಸಗಿ ಕಚೇರಿಗಳ ನಾಮಫಲಕದಲ್ಲಿ ಕನ್ನಡ ಬಳಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಬಂಧನ ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ (Narayan Gowda) ಮತ್ತು ಅವರ ಬೆಂಬಲಿಗರಿಗೆ ಕೋರ್ಟ್ ಜಾಮೀನು ನೀಡಿದೆ.
ಕಳೆದ ಡಿಸೆಂಬರ್ 27ರಂದು ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ ಗೇಟ್ ನಿಂದ ಪ್ರತಿಭಟನೆ ಮೆರವಣಿಗೆ ನಡೆಸಿದ ರಕ್ಷಣಾ ವೇದಿಕೆ ಕಾರ್ಯಕರ್ತರು ನಾಮ ಫಲಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಸುವಂತೆ ಆಗ್ರಹಿಸಿದ್ದರು
ಪ್ರತಿಭಟನೆ ವೇಳೆ ಕೆಲವು ಕಾರ್ಯಕರ್ತರು ಅನ್ಯ ಭಾಷೆಯ ಬೃಹತ್ ಫ್ಲೆಕ್ಸ್ಗಳನ್ನು ಹರಿದು ಹಾಕಿದ್ದರು. ಬೋರ್ಡ್ಗಳನ್ನು ಒಡೆದು ಹಾಕಿದ್ದರು.
ಈ ಕುರಿತಂತೆ ಚಿಕ್ಕಜಾಲ ಠಾಣೆ ಪೊಲೀಸರು ನಾರಾಯಣ ಗೌಡ ಮತ್ತವರ ಬೆಂಬಲಿಗರ ವಿರುದ್ಧ
ಸಾರ್ವಜನಿಕ ಅಸ್ತಿಪಾಸ್ತಿ ಹಾಳು ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಹೆದ್ದಾರಿ ತಡೆ, ಸಾರ್ವಜನಿಕ ಅಸ್ತಿ ಹಾನಿ ಮತ್ತು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮೂರು ಪ್ರಕರಣಗಳು ದಾಖಲಾಗಿದ್ದವು.
ಬಂಧಿತರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ನಾರಾಯಣ ಗೌಡ (Narayan Gowda) ಮತ್ತವರ ಬೆಂಬಲಿಗರು ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಕಳೆದ ಮಂಗಳವಾರ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ್ದು ಕರವೇ ಅಧ್ಯಕ್ಷ ನಾರಾಯಣ ಗೌಡ ಮತ್ತವರ ಬೆಂಬಲಿಗರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.