Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಲ್ವರ ಹತ್ಯೆಯ ನಿಜವಾದ ಕಾರಣ ಪತ್ತೆ | Nejar Murder Case
    Viral

    ನಾಲ್ವರ ಹತ್ಯೆಯ ನಿಜವಾದ ಕಾರಣ ಪತ್ತೆ | Nejar Murder Case

    vartha chakraBy vartha chakraನವೆಂಬರ್ 23, 2023101 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು. ನ23 – ಉಡುಪಿಯ ನೇಜಾರಿನಲ್ಲಿ (Nejar Murder Case) ಒಂದೇ ಕುಟುಂಬದ ನಾಲ್ಕು ಜನರನ್ನು ಹತ್ಯೆ ಮಾಡಿದ ಪಾತಕಿ ತನ್ನ ಕೃತ್ಯಕ್ಕೆ ಕಾರಣವಾದ ಅಸಲಿ ಸಂಗತಿಯನ್ನು ತನಿಖೆ ಸಮಯದಲ್ಲಿ ಬಾಯಿ ಬಿಟ್ಟಿದ್ದಾನೆ.
    ಹತ್ಯೆ ಆರೋಪಿ ಪ್ರವೀಣ್ ಚೌಗಲೆ ತನ್ನೊಂದಿಗೆ ಅಯ್ನಾಸ್ ಮಾತು ಬಿಟ್ಟಿದ್ದಕ್ಕೆ ಸಂಚು ರೂಪಿಸಿ ಅವರನ್ನು ಕೊಲೆ ಮಾಡಿದ್ದಾಗಿ ಹೇಳಿದ್ದಾನೆ.

    ಆರೋಪಿಯನ್ನು ತೀವ್ರ ವಿಚಾರಣೆ ನಡೆಸಿ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಅಗತ್ಯ ಸಾಕ್ಷಾಧಾರಗಳು,ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ಎಸ್ಪಿ ಡಾ.ಅರುಣ್ ತಿಳಿಸಿದ್ದಾರೆ.
    ಅಯ್ನಾಸ್ ಮತ್ತು ಅರೋಪಿ ಪ್ರವೀಣ್ಗೆ ಎಂಟು ತಿಂಗಳಿಂದ ಪರಿಚಯ ಇತ್ತು. ಒಂದೇ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ಇಬ್ಬರ ಮಧ್ಯೆಯಲ್ಲಿ ಗೆಳೆತನ ಇತ್ತು. ಅರೋಪಿ ಪ್ರವೀಣ್ ಆಯ್ನಾಸ್ಗೆ ಹಲವಾರು ಬಾರಿ ಸಹಾಯ ಮಾಡಿದ್ದನು ಎಂದು ತಿಳಿಸಿದ್ದಾರೆ.

    ಅಯ್ನಾಸ್ ಪ್ರವೀಣ್ ಜೊತೆ ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಇದೇ ಕಾರಣಕ್ಕೆ ಕೊಲೆ ಮಾಡಬೇಕೆಂದು ಪ್ರವೀಣ್ ಪೂರ್ವ ಸಿದ್ಧತೆ ಮಾಡಿಕೊಂಡಿದ್ದ. ಕೊಲೆ ಮಾಡುವ ದಿನ ಅವನು ಟೋಲ್ಗೇಟ್ ಬಳಿ ಕಾರು ಇಟ್ಟು ಬೇರೆ ಬೇರೆ ವಾಹನದಲ್ಲಿ ಡ್ರಾಪ್ ಪಡೆದುಕೊಂಡು ತೃಪ್ತಿನಗರಕ್ಕೆ ಹೋಗಿದ್ದಾನೆ.
    ಅಯ್ನಾಸ್ ಮನೆಗೆ ನುಗ್ಗಿದ ಪ್ರವೀಣ್, ಆರಂಭದಲ್ಲಿ ಚಾಕುವಿನಿಂದ ಇರಿದು ಆಕೆಯನ್ನು ಹತ್ಯೆ ಮಾಡಿ ಬಳಿಕ ಸಾಕ್ಷಿ ನಾಶಗೊಳಿಸಲು ಮನೆಯಲ್ಲಿದ್ದ ಹಸೀನಾ, ಅಫ್ನಾನ್, ಆಸಿಂ ಎಂಬವರನ್ನು ಕೊಲೆ ಮಾಡಿದ್ದಾನೆ. ಕೃತ್ಯ ಎಸಗಿದ ನಂತರ ಬೇರೆ ಬೇರೆ ವಾಹನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪರಾರಿಯಾಗಿದ್ದಾನೆ. ಕೈ ಗಾಯಕ್ಕೆ ಚಿಕಿತ್ಸೆ ಪಡೆದು, ಚಾಕು ಮನೆಯಲ್ಲೇ ಇಟ್ಟು ಪತ್ನಿಯ ಸಂಬಂಧಿಕರ ಮನೆಗೆ ಹೋಗಿದ್ದಾನೆ ಎಂದರು.

    ಆಶ್ರಯದಾತನ ವಿಚಾರಣೆ:
    ಕುಡುಚಿಯಲ್ಲಿ ಆರೋಪಿಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ವಿಚಾರಣೆ ಮಾಡಿದ್ದೇವೆ. ಹೆಚ್ಚುವರಿ ಮಾಹಿತಿ ಬೇಕಾಗಿದ್ದರೆ ಅವರಿಂದ ಮಾಹಿತಿ ಪಡೆಯುತ್ತೇವೆ ಎಂದು ಎಸ್ಪಿ ಅರುಣ್ ಹೇಳಿದ್ದಾರೆ. ಅಲ್ಲದೆ, ಕೈಗೆ ಗಾಯವಾಗಿರುವ ಬಗ್ಗೆ ಪತ್ನಿ ಪ್ರಶ್ನಿಸಿದಾಗ ಸುಳ್ಳು ಹೇಳಿ ದಾರಿ ತಪ್ಪಿಸಿದ್ದಾನೆ. ನಾಲ್ವರನ್ನು ಕೊಲೆಗೈದು ಚೂರಿಯನ್ನು ಅಡುಗೆ ಮನೆಯಲ್ಲಿ ಇಟ್ಟಿದ್ದಾನೆ. ಪತ್ನಿಗೆ ಸಂಶಯ ಬರದ ಹಾಗೆ ಮನೆಯಲ್ಲಿ ಪ್ರವೀಣ್ ವರ್ತಿಸಿದ್ದನು ಎಂದರು.
    ನಗರದಲ್ಲಿ ಹೆಚ್ಚುವರಿ ಸಿಸಿಟಿವಿಗಳ ಅಳವಡಿಕೆ ಮಾಡಿದ್ದೇವೆ. ಜಿಲ್ಲೆಯ ಎಲ್ಲಾ ಗಡಿಪ್ರದೇಶದಲ್ಲಿ ಸಿಸಿಟಿವಿ ಕಣ್ಗಾವಲು ಇರಿಸುತ್ತೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಕುಟುಂಬ ತನಿಖೆಗೆ ಬಹಳ ಸಹಕಾರ ಕೊಟ್ಟಿದ್ದಾರೆ. ನೂರ್ ಮೊಹಮ್ಮದ್ ಕುಟುಂಬ ಬಹಳ ನೋವಲ್ಲಿದ್ದಾರೆ. ವಿಶೇಷ ಪಿ.ಪಿ ನೇಮಕಕ್ಕೆ ನಾವು ಸಹಕಾರ ನೀಡುತ್ತೇವೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಬಗ್ಗೆ ಕುಟುಂಬ ಮನವಿ ನೀಡಿದೆ ಎಂದು ಎಸ್ಪಿ ಅರುಣ್ ತಿಳಿಸಿದರು.

    ತನಿಖೆಗೆ ಒಟ್ಟು 11 ತಂಡ ರಚನೆ ಮಾಡಿದ್ದೆವು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ. ಹಸೀನಾಗೆ ಆರ್ಥಿಕ ಮೋಸವಾದ ಬಗ್ಗೆ ಮಾಹಿತಿ ಸಿಕ್ಕಿದೆ. ಕುಟುಂಬದಿಂದ ದೂರು ಪಡೆದುಕೊಂಡು ತನಿಖೆ ಮಾಡುತ್ತೇವೆ. ನಾಲ್ವರ ಕೊಲೆ ಪ್ರಕರಣ ದೊಡ್ಡ ಸವಾಲಾಗಿತ್ತು. ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾದ ಪ್ರಕರಣ ಇದಾಗಿತ್ತು. ನಾವು ತಂಡವಾಗಿ ಕೆಲಸ ಮಾಡಿ ಆರೋಪಿಯನ್ನು ಬಂಧಿಸಿದ್ದೇವೆ. ಆರೋಪಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಇಬ್ಬರು ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜನೆ ಮಾಡಲಾಗಿದೆ ಎಂದರು.

    ಚಾರ್ಜ್ ಶೀಟ್ ಗೆ ಸಿದ್ಧತೆ:
    ಹತ್ಯೆ ಪ್ರಕರಣ ಸಂಬಂಧ ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 70-80 ದಿನಗಳು ಇವೆ. ಎಲ್ಲಾ ಸಾಕ್ಷಿಗಳ ಸಂಗ್ರಹ ಮಾಡುತ್ತಿದ್ದೇವೆ. ಸುಮಾರು 50 ಪೊಲೀಸರು ಇದರ ಹಿಂದೆ ಕೆಲಸ ಮಾಡಿದ್ದಾರೆ. ಆರೋಪಿ ಪತ್ತೆ ಮಾಡಿದ ಪೊಲೀಸರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದರು.
    ಆ್ಯಪ್ ಲೊಕೇಶನ್ ಮೂಲಕ ಆಯ್ನಾಸ್ ಮನೆಯನ್ನು ಪ್ರವೀಣ್ ಕಂಡುಹುಡುಕಿದ್ದಾನೆ. ಆರೋಪಿ ಕೃತ್ಯಕ್ಕೂ ಮೊದಲು ಮನೆಗೆ ಬಂದಿರಲಿಲ್ಲ. ಹೆಚ್ಚುವರಿ ತಾಂತ್ರಿಕ ಮಾಹಿತಿಗಳನ್ನು ನಾವು ಕೊಡುವುದಿಲ್ಲ. ಚಾರ್ಜ್ ಶೀಟ್ನಲ್ಲಿ ನ್ಯಾಯಾಲಯಕ್ಕೆ ಎಲ್ಲಾ ಮಾಹಿತಿಗಳನ್ನು ದಾಖಲಿಸುತ್ತೇವೆ ಎಂದು ಅರುಣ್ ಹೇಳಿದ್ದಾರೆ.

    Verbattle
    Verbattle
    Verbattle
    crime m murder murder case Nejar Murder Case News Trending ಅಪರಾಧ ಸುದ್ದಿ ಉಡುಪಿ ಕಾರು ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleHoney Trap ಸುಳಿಗೆ ಬಿದ್ದ ನಿರ್ಮಾಪಕ
    Next Article ಸಮಾಧಾನಗೊಂಡ ರಮೇಶ್ ಜಾರಕಿಹೊಳಿ | Ramesh Jarkiholi
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • CarrollGuert ರಲ್ಲಿ ಅಗ್ನಿ ಅವಘಡದಿಂದ ತಪ್ಪಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಜಿಗಿದ | Koramangala Fire
    • RicardoCor ರಲ್ಲಿ ಯಾರೇ.. ಕೂಗಾಡಲಿ…
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.