ಬೆಂಗಳೂರು – ಹೊಸ ವರ್ಷ ಸ್ವಾಗತಕ್ಕೆ ಸಜ್ಜುಗೊಂಡಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ತತ್ತರಿಸಿದ ಜನರಿಗೆ ಈ ಸುದ್ದಿಯಿಂದ ಕೊಂಚ ನಿರಾಳವಾದಂತಾಗಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ಮತ್ತು ಮತ್ತು ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡಲು ನಿರ್ಧರಿಸಲಾಗಿದೆ ಇದರಿಂದಾಗಿವಿದ್ಯುತ್ ಶುಲ್ಕ ಪರಿಷ್ಕರಿಸಲಾಗಿದೆ
ಪರಿಷ್ಕೃತ ಆದೇಶದನ್ವಯ ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಈ ಕುರಿತಂತೆ ಇಂಧನ ಸಚಿವ ಸುನಿಲ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಪರಿಷ್ಕೃತ ವಿದ್ಯುತ್ ಶುಲ್ಕ ಜನವರಿ 1ರಿಂದ ಅನ್ವಯವಾಗಲಿದೆ. ಇದು ಮಾರ್ಚ್‍ವರೆಗೂ ಅಂದರೆ 3 ತಿಂಗಳು ಚಾಲ್ತಿಯಲ್ಲಿರುತ್ತದೆ.
Previous ArticleFootball ಶ್ರೇಷ್ಠ Pele ನಿಧನ
Next Article Rahul Gandhi ಯಿಂದ ನಿಯಮ ಉಲ್ಲಂಘನೆ