ಬೆಳಗಾವಿ- ಈ ಬಾರಿಯೂ ಹೊಸ ವರ್ಷದ ಸಂಭ್ರಮಾಚರಣೆಗೆ ಸಾಂಕ್ರಾಮಿಕ ಕೋವಿಡ್ ಕರಿ ನೆರಳು ಆವರಿಸಿದೆ. ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸಭೆ,ಸಮಾರಂಭಗಳಿಗೆ ಮಾಸ್ಕ್ ಕಡ್ಡಾಯಗೊಳಿಸುವ ಜೊತೆಗೆ ಹೊಸ ನಿಯಮಾವಳಿ ಪ್ರಕಟಿಸಿದೆ.
ಬೆಳಗಾವಿಯಲ್ಲಿ ನಡೆದ ಕೋವಿಡ್ ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ .ಅಶೋಕ,
ಚೀನಾ ಮತ್ತು ಬೇರೆ ಬೇರೆ ದೇಶದಲ್ಲಿ ಕೋವಿಡ್ ಸೋಂಕಿತ ಸಂಖ್ಯೆ ಹೆಚ್ಚಾಗಿದೆ.ಹೀಗಾಗಿ ನಮ್ಮಲ್ಲೀ ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಹೊಸ ವರ್ಷಾಚರಣೆಯ ವೇಳೆ ಕೆಲವು ಕಠಿಣ ಕ್ರಮಗಳನ್ನು ಪಾಲಿಸಬೇಕು.ಈ ಕಾರ್ಯಕ್ರಮಗಳಿಗೆ
ಮಕ್ಕಳು ಮತ್ತು ಗರ್ಭಿಣಿಯರಿಗೆ ನಿಷೇಧ ಹೇರಲಾಗಿದೆ. ಉಳಿದಂತೆ ಪಾರ್ಟಿಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಕರೊನಾ ರೂಲ್ಸ್ ಪಾಲಿಸಬೇಕು. ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ ಹೊಸ ವರ್ಷದ ಆಚರಣೆಗಳು ರಾತ್ರಿ 1ರ ಒಳಗೇ ಅಂತ್ಯವಾಗಬೇಕು ಎಂದು ವಿವರಿಸಿದರು.
ರಾಜ್ಯದ ಸಿನಿಮಾ ಥಿಯೇಟರ್ಗಳಲ್ಲಿ ಮಾಸ್ಕ್ ಧರಿಸಿವುದು ಕಡ್ಡಾಯ. ಶಾಲಾ-ಕಾಲೇಜುಗಳ ತರಗತಿಯೊಳಗೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.
ಇದಲ್ಲದೆ ಪಬ್, ಕ್ಲಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಸ್ಯಾನಿಟೈಸರ್ ಬಳಕೆ ಕಡ್ಡಾಯ. ರೆಸಾರ್ಟ್ಗಳಲ್ಲಿ ಕರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬಾರ್ ಸಿಬ್ಬಂದಿ ಮಾತ್ರವಲ್ಲ ಬಾರ್ಗೆ ಬರೋ ಗ್ರಾಹಕರಿಗೂ ಎರಡೂ ಲಸಿಕೆ ಹಾಕಿಸಿಕೊಂಡಿರಬೇಕು ಎಂದು ಹೇಳಿದರು.
ಲಾಕ್ ಡೌನ್ ಬೇಡ.:
ಇದಕ್ಕೂ ಮುನ್ನ ಕೋವಿಡ್ ತಡೆಗಟ್ಟಲು ಕೇಂದ್ರ ಸರ್ಕಾರ ರವಾನಿಸಿರುವ ಮಾರ್ಗ ಸೂಚಿಗಳ ಬಗ್ಗೆ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಒಂದಿಷ್ಟು ಮಾರ್ಗಸೂಚಿಗಳನ್ನು ಜಾರಿಗೆ ತರಲು ನಿರ್ಧರಿಸಲಾಯಿತು.
ಲಾಕ್‍ಡೌನ್ ಜಾರಿ ಮಾಡುವುದಾಗಲಿ, ಸಾರ್ವಜನಿಕರು, ಮಧ್ಯಮವರ್ಗದವರು, ಶ್ರಮಿಕರು ಮತ್ತಿತರರಿಗೆ ಆರ್ಥಿಕ ಚಟುವಟಿಕೆಗಳಿಗೆ ಕಡಿವಾಣ ಹಾಕದೆ ಕೋವಿಡ್ ನಿಯಮಗಳನ್ನು ಜಾರಿ ಮಾಡಲು ಸಭೆ ನಿರ್ಧರಿಸಿತು.
Previous Articleಛಲವಿದ್ದರೆ ಏನು ಬೇಕಾದರೂ ಮಾಡಬಹುದು-ದೀಪಕ್ ತಿಮ್ಮಯ
Next Article ಸಂಕ್ರಾಂತಿಗೆ ಸಂಪುಟ ವಿಸ್ತರಣೆ