ಬೆಂಗಳೂರು : ಅಧಿಕಾರ ಹಸ್ತಾಂತರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಹಗ್ಗ ಜಗ್ಗಾಟ ನಡೆದಿರುವ ಬೆನ್ನೆಲ್ಲೇ, ಇದರ ಸಾಲಿಗೆ ಈಗ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಸೇರ್ಪಡೆಯಾಗಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾವು ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದೇನೆ. ಹಲವು ಬಾರಿ ಶಾಸಕರಾಗಿ ಮಂತ್ರಿಯಾಗಿ, ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಅನುಭವ ತಮಗಿದೆ ಹೀಗಾಗಿ ಹೈಕಮಾಂಡ್ ಅವಕಾಶ ಕಲ್ಪಿಸಿದರೆ ಮುಖ್ಯಮಂತ್ರಿ ಹುದ್ದೆ ನಿಭಾಯಿಸುವುದಾಗಿ ತಿಳಿಸಿದ್ದಾರೆ.
ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈಗಾಗಲೇ ಸಿಎಂ ಇದ್ದಾರೆ. ಸಿಎಂ, ಡಿಸಿಎಂ ಎಲ್ಲರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದಾರೆ. ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇರುತ್ತದೆ. ಅದೇ ರೀತಿ ನನಗೂ ಇದೆ.ಆದರೆ, ಮುಖ್ಯಮಂತ್ರಿ ಯಾರು ಆಗಬೇಕು ಎನ್ನುವುದನ್ನು ಹೈಕಮಾಂಡ್ ಮಾತ್ರ ನಿರ್ಧರಿಸುತ್ತದೆ ಎಂದು ಹೇಳಿದರು
ಈ ವಿಷಯದಲ್ಲಿ ಬಿಜೆಪಿ ಸುಮ್ಮನೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರು ಕೇವಲ ಭಾಷಣ ವೀರರು. ಅವರಿಗೆ ಜನರ ಯಾವ ಸಮಸ್ಯೆಗಳೂ ಅರ್ಥವಾಗುವುದಿಲ್ಲ. ಕೇಂದ್ರದಲ್ಲಿ ಸಂಸದರು ನಮ್ಮ ರಾಜ್ಯದ ಪರ ಯಾವತ್ತೂ ಧ್ವನಿ ಎತ್ತಿಲ್ಲ. ಬಿಜೆಪಿಯಲ್ಲೇ ಕಿತ್ತಾಟ, ಗೊಂದಲ ಇದೆ. ಆದರೆ, ನಮ್ಮಲ್ಲಿ ಇಂತಹ ಯಾವುದೇ ಗೊಂದಲ ಕಿತ್ತಾಟಇಲ್ಲ ಎಂದು ಸ್ಪಷ್ಟಪಡಿಸಿದರು
ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ಆದರೆ, ಸಮಯ ಹಾಗೂ ಸಂದರ್ಭ ಎಲ್ಲವನ್ನೂ ನಿರ್ಧರಿಸುತ್ತದೆ. ಈ ವಿಷಯದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ, ಈ ವಿಷಯದಲ್ಲಿ ನನ್ನನ್ನು ಎಳೆ ತರಬೇಡಿ ಎಂದು ಹೇಳಿದರು.
Previous Articleಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?
Next Article ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

