ಬೆಂಗಳೂರು,ಜೂ.10- ಮಾದಕ ವಸ್ತುಗಳ ದಂಧೆಕೋರರ ವಿರುದ್ಧ ಸಮರ ಸಾರಿರುವ ಈಶಾನ್ಯ ವಿಭಾಗದ ಪೊಲೀಸರು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೈಜೀರಿಯಾ ಮೂಲದ ಜಾನ್ ಅಬ್ರಾಹಂ ಬಂಧಿತ ಆರೋಪಿಯಾಗಿದ್ದು ಆತನಿಂದ 1.4 ಕೆ.ಜಿ. ಎಂಡಿಎಂಎ, 6 ಕೆ.ಜಿ. ಗಾಂಜಾ, 7 ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.
ಯಲಹಂಕದ ಪಾಲನಹಳ್ಳಿ ತೋಟದ ಮನೆಯಲ್ಲಿ ಮಾದಕ ಪದಾರ್ಥಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿಯು ಉದ್ಯಮಿಗಳು, ಐಟಿಬಿಟಿ ಉದ್ಯೋಗಿಗಳು, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದನು.
ಈ ಸಂಬಂಧಿಸಿದಂತೆ ಖಚಿತ ಮಾಹಿತಿಯೊಂದಿಗೆ ಆರೋಪಿ ವಾಸವಿದ್ದ ಮನೆಯ ಮೇಲೆ ದಾಳಿ ನಡೆಸಿದ ಯಲಹಂಕ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನಿಗೆ ಮಾದಕ ಪದಾರ್ಥ ಸರಬರಾಜು ಮಾಡುತ್ತಿದ್ದ ಚಕ್ರೆಚಾ ಎಂಬ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರೆದಿದೆ.
Previous Articleಬೆಂಗಳೂರಲ್ಲಿ ಮತ್ತೆ ಮಹಿಳೆ ಮೇಲೆ ಆ್ಯಸಿಡ್ ದಾಳಿ
Next Article ಸಾಯಲು ಯತ್ನಿಸಿದ ಯುವಕನನ್ನು ರಕ್ಷಿಸಿದ ಪೇದೆ