Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಕೆನಡಾ ಗೆ ಇನ್ನು ವೀಸಾ ಸಿಗೋದಿಲ್ಲ! | Canada
    Viral

    ಬೆಂಗಳೂರಿನಲ್ಲಿ ಕೆನಡಾ ಗೆ ಇನ್ನು ವೀಸಾ ಸಿಗೋದಿಲ್ಲ! | Canada

    vartha chakraBy vartha chakraಅಕ್ಟೋಬರ್ 20, 2023234 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.20-ಕೆಲ ದಿನಗಳಿಂದ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದ ಭಾರತ ಹಾಗೂ ಕೆನಡಾ (Canada) ರಾಜತಾಂತ್ರಿಕ ಬಿಕ್ಕಟ್ಟು ಈಗ ಮತ್ತೆ ಉಲ್ಬಣಗೊಂಡಿದೆ.
    ಭಾರತದ ಸೂಚನೆ ಮೇರೆಗೆ 41 ರಾಜತಾಂತ್ರಿಕರನ್ನು ವಾಪಸ್‌ ಕರೆಸಿಕೊಂಡ ಬೆನ್ನಲ್ಲೇ ಕೆನಡಾ ಮತ್ತೊಂದು ಉದ್ಧಟತನ ಮಾಡಿ ಬೆಂಗಳೂರು ಹಾಗೂ ಚಂಡೀಗಢದಲ್ಲಿ ವೀಸಾ ಹಾಗೂ ರಾಜತಾಂತ್ರಿಕ ನೆರವಿನ ಸೇವೆ ಒದಗಿಸುವುದಿಲ್ಲ ಎಂದು ಘೋಷಿಸಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಹಳಸುವ ಸಾಧ್ಯತೆ ಇದೆ.
    ಬೆಂಗಳೂರು, ಚಂಡೀಗಢ ಹಾಗೂ ಮುಂಬೈನಲ್ಲಿರುವ 41 ರಾಜತಾಂತ್ರಿಕ ಅಧಿಕಾರಿಗಳು ಹಾಗೂ ಅವರ ಸಹಾಯಕ ಸಿಬ್ಬಂದಿಯನ್ನು ಕೆನಡಾ ವಾಪಸ್‌ ಕರೆಸಿಕೊಂಡ ಕಾರಣ ಮೂರೂ ನಗರಗಳಲ್ಲಿ ತಾತ್ಕಾಲಿಕವಾಗಿ ವೀಸಾ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

    ಆದರೆ, ವಾಸ್ತವದಲ್ಲಿ, ಭಾರತವು ಹೆಚ್ಚುವರಿ ರಾಜತಾಂತ್ರಿಕರನ್ನು ವಾಪಸ್‌ ಕರೆಸಿಕೊಳ್ಳಿ ಎಂದು ಸೂಚಿಸಿದ್ದಕ್ಕೆ ಪ್ರತಿಯಾಗಿಯೇ ಕೆನಡಾ ಇಂತಹ ಉದ್ಧಟತನದ ತೀರ್ಮಾನ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.
    17 ಸಾವಿರ ಮಂದಿ ಅತಂತ್ರ:
    ಬೆಂಗಳೂರು, ಮುಂಬೈ, ಚಂಡೀಗಢದಲ್ಲಿ ತಾತ್ಕಾಲಿಕವಾಗಿ ವೀಸಾ ಸೇವೆಯನ್ನು ಸ್ಥಗಿತಗೊಳಿಸಿದ ಕಾರಣ ಸುಮಾರು 17,500 ಅರ್ಜಿಗಳ ಪರಿಸ್ಥಿತಿ ಅತಂತ್ರವಾಗಿದೆ. ಮೂರೂ ನಗರಗಳಲ್ಲಿ ಇಷ್ಟು ಭಾರತೀಯರು ಕೆನಡಾ ವೀಸಾಕ್ಕಾಗಿ ಅರ್ಜಿ ಹಾಕಿದ್ದರು. ಈಗ ವೀಸಾ ಸೇವೆ ನಿಲ್ಲಿಸಿದ ಕಾರಣ ಇಷ್ಟೂ ಜನರಿಗೆ ತೊಂದರೆಯಾಗಲಿದೆ ಎಂದು ತಿಳಿದುಬಂದಿದೆ. ಭಾರತವು ಈಗಾಗಲೇ ಕೆನಡಾಗೆ ವೀಸಾ ಸೇವೆಯನ್ನು ಸ್ಥಗಿತಗೊಳಿಸಿದೆ. ದೆಹಲಿಯಲ್ಲಿ ಮಾತ್ರ ಕೆನಡಾ ವೀಸಾ ಸೇವೆ ಮುಂದುವರಿಯುತ್ತಿದೆ.

    ಕೆನಡಾ (Canada) ಆಕ್ರೋಶ:
    ಭಾರತದಲ್ಲಿರುವ ರಾಜತಾಂತ್ರಿಕರನ್ನು ವಾಪಸ್‌ ಕರೆಸಿಕೊಳ್ಳಿ ಎಂಬುದಾಗಿ ಭಾರತ ಸೂಚನೆ ನೀಡಿರುವುದಕ್ಕೆ ಕೆನಡಾ ವಿದೇಶಾಂಗ ಸಚಿವೆ ಮೆಲಾನೀ ಜೋಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಭಾರತವು ಅಕ್ಟೋಬರ್‌ 20ರೊಳಗೆ ಕೆನಡಾ ರಾಜತಾಂತ್ರಿಕರ ರಾಜತಾಂತ್ರಿಕ ವಿನಾಯಿತಿ ರದ್ದುಗೊಳಿಸಲಾಗುವುದು ಎಂದು ಸೂಚಿಸಿದೆ. ಇದು ಅನೈತಿನಕ ನಿರ್ಧಾರವಾಗಿದೆ. ಇದರಿಂದಾಗಿ ಭಾರತದಲ್ಲಿರುವ 41 ರಾಜತಾಂತ್ರಿಕರು ಹಾಗೂ ಅವರ 42 ಸಿಬ್ಬಂದಿಯು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ, ರಾಜತಾಂತ್ರಿಕರನ್ನು ವಾಪಸ್‌ ಕರೆಸಿಕೊಳ್ಳಲಾಗುತ್ತಿದೆ” ಎಂದು ಟ್ವೀಟ್‌ ಮಾಡಿದ್ದಾರೆ. ಚಂಡೀಗಢ, ಬೆಂಗಳೂರು, ಮುಂಬೈನಲ್ಲಿರುವ ರಾಜತಾಂತ್ರಿಕರನ್ನು ಕೆನಡಾ ವಾಪಸ್‌ ಕರೆಸಿಕೊಂಡಿದೆ.

    ರಾಜತಾಂತ್ರಿಕ ಸಂಘರ್ಷ:
    ಜೂನ್ 18ರಂದು ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆನ್ಸಿಗಳ ಕೈವಾಡ ಇರುವ ಸಾಧ್ಯತೆ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಅವರು ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಭಾರತ ಮತ್ತು ಕೆನಡಾ ಮಧ್ಯೆ ರಾಜತಾಂತ್ರಿಕ ಸಂಘರ್ಷ ಏರ್ಪಟ್ಟಿತ್ತು. ಭಾರತವು ಟ್ರೂಡೋ ಆರೋಪಕ್ಕೆ ಪ್ರತಿಕ್ರಿಯಿಸಿ, ಇದೊಂದು ಆಧಾರ ರಹಿತ ಆರೋಪ ಎಂದು ಹೇಳಿತ್ತು. ಅಲ್ಲದೇ ಉಭಯ ರಾಷ್ಟ್ರಗಳು ರಾಜತಾಂತ್ರಿಕ ಅಧಿಕಾರಿಗಳನ್ನು ವಜಾ ಮಾಡುವ ಮೂಲಕ ಸ್ಪರ್ಧೆಗೆ ಇಳಿದಿದ್ದವು. ಈಗ ಬಿಕ್ಕಟ್ಟು ಮತ್ತೊಂದು ಹಂತ ತಲುಪಿದೆ.

    Verbattle
    Verbattle
    Verbattle
    Bangalore Bengaluru Canada Karnataka News Trending visa ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಕೈಗಾರಿಕೆ ಬೆಳವಣಿಗೆಗೆ ಒತ್ತು, 9 Vision Group ರಚನೆ
    Next Article BJP ಬಿಡುಗಡೆ ಮಾಡಿದ ಕಲೆಕ್ಷನ್ ವಂಶಾವಳಿ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • alpha66_pvKr ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Tdrspf ರಲ್ಲಿ ಸಿಟಿ ರವಿಯ ಕೊಳಕು ತೊಳೆಯಲು ಸಾಧ್ಯವಿಲ್ಲವಂತೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.