ದಕ್ಷಿಣ ಕನ್ನಡ, ಫೆ.5: ನೀರಲ್ಲಿ ಕರಗದ, ಮಣ್ಣಲ್ಲಿ ಮಣ್ಣಾಗದ, ಸುಟ್ಟರೆ ವಿಷಕಾರಿ ಅಂಶವನ್ನು ಗಾಳಿಗೆ ಸೇರಿಸುವ ಪ್ಲಾಸ್ಟಿಕ್ ಪರಿಸರ ಮತ್ತು ಸಮುದಾಯ ಆರೋಗ್ಯಕ್ಕೆ ಮಾರಕ.
ಇಂತಹ ಪ್ಲಾಸ್ಟಿಕ್ ಬಳಕೆ ತ್ಯಜಿಸುವ ಮೂಲಕ ಜೀವಸಂಕುಲವನ್ನು ಉಳಿಸಬೇಕು ಎಂದು ಅರಣ್ಯ, ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಕರೆನೀಡಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂದಿರದ ಬಳಿ, ಧರ್ಮಾಧಿಕಾರಿ ಪದ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆ ಅವರ ಸಾನ್ನಿಧ್ಯದಲ್ಲಿ ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಕ್ಷೇತ್ರ ಫಲಕ ಅನಾವರಣ ಮಾಡಿ ಮಾತನಾಡಿದ ಅವರು,ಅನಿವಾರ್ಯ ಸಂದರ್ಭದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಮಿತವಾಗಿ ಬಳಸುವಂತೆ ಮನವಿ ಮಾಡಿದರು.
ಮರುಬಳಕೆ ಪ್ರವೃತ್ತಿ ಜನರಲ್ಲಿ ಕಡಿಮೆ ಆಗಿದ್ದು, ತ್ಯಾಜ್ಯ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತ್ಯಾಜ್ಯ ವಿಲೇವಾರಿ ಸ್ಥಳೀಯ ಸಂಸ್ಥೆಗಳಿಗೆ ಸವಾಲಾಗಿದೆ. ಅದರಲ್ಲೂ ಪ್ಲಾಸ್ಟಿಕ್ ತ್ಯಾಜ್ಯ ದೊಡ್ಡ ಸವಾಲಾಗಿದ್ದು, ಜನರಲ್ಲಿ ಜಾಗೃತಿ ಮೂಡದ ಹೊರತು ಇದಕ್ಕೆ ಪರಿಹಾರ ದೊರಕುವುದು ದುರ್ಲಭ ಎಂದರು.
ಅರಣ್ಯ ನಾಶ, ಪ್ರಕೃತಿಯ ಮೇಲಿನ ದಬ್ಬಾಳಿಕೆಯಿಂದ ಇಂದು ಜಾಗತಿಕ ತಾಪಮಾನ ಏರಿಕೆ ಆಗುತ್ತಿದೆ, ಹವಾಮಾನ ವೈಪರೀತ್ಯದಿಂದ ಜಾಗತಿಕ ಸಮಸ್ಯೆಗಳು ತಲೆದೋರುತ್ತಿವೆ, ಅಭಿವೃದ್ಧಿಯೂ ಆಗಬೇಕು, ಪ್ರಕೃತಿಯೂ ಉಳಿಯಬೇಕು ಹೀಗಾಗಿ ಸುಸ್ಥಿರ ಅಭಿವೃದ್ಧಿ ಇಂದಿನ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಆಹಾರದಲ್ಲಿ ಮಾಲಿನ್ಯ ಇದೆ, ಗಾಳಿಯಲ್ಲಿ ಮಾಲಿನ್ಯ ಇದೆ, ನೀರಿನಲ್ಲಿ ಮಾಲಿನ್ಯ ಇದೆ. ಇದರಿಂದ ಅನೇಕ ರೋಗ ರುಜಿನಗಳು ಜನರನ್ನು ಕಾಡುತ್ತಿದ್ದು, ಸಮುದಾಯ ಆರೋಗ್ಯ ರಕ್ಷಣೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು ಎಂದರು.
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿಯ ಸಂದರ್ಭದಲ್ಲಿ ಸಾವಿರಾರು ಜನರು ಪಾದಯಾತ್ರೆಯ ಮೂಲಕ ಬರುತ್ತಾರೆ. ಅರಣ್ಯ ಮಾರ್ಗದಲ್ಲಿ ಬರುವಾಗ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ತಟ್ಟೆ, ಲೋಟ, ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದನ್ನು ವನ್ಯಜೀವಿಗಳು ತಿಂದು ಸಾವಿಗೀಡಾಗುತ್ತವೆ. ಹೀಗಾಗಿ ಈ ಬಾರಿ ಪಾದಯಾತ್ರೆಯಲ್ಲಿ ಬರುವ ಭಕ್ತರು ಅರಣ್ಯ ಪ್ರವೇಶಿಸುವ ಮುನ್ನ ತಪಾಸಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗುವುದು ಎಂದು ತಿಳಿಸಿದರು.
ಯಂತ್ರಗಳ ಬಳಕೆ:
ಸಮಾರಂಭದಲ್ಲಿ ಉಪಸ್ಥಿತರಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಧರ್ಮಸ್ಥಳ ಸ್ವಚ್ಛ ನಗರಿಯಾಗಿದ್ದು, ಇಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಶ್ರಮಿಸುತ್ತಿದ್ದೇವೆ. ಆದರೆ ಜನರಲ್ಲಿ ಸ್ವಯಂ ಪರಿಸರ ಜಾಗೃತಿ ಮೂಡಿದರೆ ಮಾತ್ರ ಇದನ್ನು ನಿಗ್ರಹಿಸಲು ಸಾಧ್ಯ ಎಂದರು.
ಆಧುನಿಕ ಯಂತ್ರಗಳ ನೆರವಿನಿಂದ ತ್ಯಾಜ್ಯವನ್ನು ಸಂಸ್ಕರಿಸಿ ಪುನರ್ ಬಳಕೆ ಮಾಡಲು ಆ ಮೂಲಕ ಸುಸ್ಥಿರ ಅಭಿವೃದ್ಧಿಗೆ ಕ್ಷೇತ್ರ ಒತ್ತು ನೀಡಿದೆ ಎಂದು ತಿಳಿಸಿದರು. ಜನರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವಂತೆ ಕರೆ ನೀಡಿದರು.
11 ಪ್ರತಿಕ್ರಿಯೆಗಳು
generic clomiphene c10m1d how to buy cheap clomiphene tablets where can i buy cheap clomid pill where can i get clomid no prescription can i purchase cheap clomiphene without insurance clomid generic brand buy clomiphene pill
This is the stripe of serenity I have reading.
I am in point of fact delighted to gleam at this blog posts which consists of tons of worthwhile facts, thanks towards providing such data.
propranolol tablet – propranolol ca order methotrexate 10mg generic
generic amoxicillin – diovan 80mg uk order ipratropium generic
buy azithromycin pills – order bystolic 5mg bystolic 5mg uk
clavulanate for sale – https://atbioinfo.com/ ampicillin over the counter
purchase esomeprazole generic – https://anexamate.com/ esomeprazole for sale online
order medex without prescription – cou mamide buy cozaar 25mg pills
buy mobic 15mg sale – swelling buy generic meloxicam
order generic prednisone 5mg – https://apreplson.com/ order prednisone 10mg online