Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಮಿಳುನಾಡಿಗೆ ನೀರು ಬಿಡುಗಡೆ ಸಾಧ್ಯವಿಲ್ಲ | Cauvery
    Trending

    ತಮಿಳುನಾಡಿಗೆ ನೀರು ಬಿಡುಗಡೆ ಸಾಧ್ಯವಿಲ್ಲ | Cauvery

    vartha chakraBy vartha chakraಸೆಪ್ಟೆಂಬರ್ 14, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Cauvery
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ. 14: ರಾಜ್ಯದಲ್ಲಿ ಮಳೆಯ ಅಭಾವ ತೀವ್ರವಾಗಿದೆ.ಹೀಗಾಗಿ ಕಾವೇರಿ ಜಲಾನಯನ ಪ್ರದೇಶದ ಎಲ್ಲಾ ಜಲಾಶಯಗಳು ನೀರಿಲ್ಲದೆ ಭಣಗುಡುತ್ತಿವೆ.ಹೀಗಾಗಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ತೀರ್ಮಾನಿಸಿದೆ.
    ರಾಜ್ಯ ಸರ್ಕಾರದ ನಿಲುವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ ಕಾವೇರಿ (Cauvery) ನೀರಿನ ಮೇಲೆ ಅವಲಂಬಿತರಾಗಿರುವ ರೈತರು , ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಕಾವೇರಿ (Cauvery) ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್.ಹಾಗೂ ಕಬಿನಿಯಿಂದ 5000 ಕ್ಯೂಸೆಕ್ಸ್ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
    ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀ ಲಿಸುವಂತೆ ಕೋರಿದ್ದಾರಲ್ಲದೆ, ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಲು ಮನವಿ ಮಾಡಿದ್ದಾರೆ.
    ಕರ್ನಾಟಕವು ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲ್ಲೂಕುಗಳು ಮುಂಗಾರು ವೈಫಲ್ಯ ದಿಂದ ತೀವ್ರ ಬರಕ್ಕೆ ತುತ್ತಾಗಿವೆ ಎಂದು ವಿವರಿಸಿದ್ದಾರೆ.

    ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
    ಸೆಪ್ಟೆಂಬರ್ 12 ಹಾಗೂ 24 ವರೆಗೆ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಡಿ: 12.09.2023 ರಂದು 24.233 ಟಿಎಂಸಿ ಸಂಗ್ರಹವಿದ್ದು ( live storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆ ಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ. .
    ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ವಿವರಿಸಿದ್ದಾರೆ

    Verbattle
    Verbattle
    Verbattle
    Cauvery Government Karnataka News Politics tamil nadu ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಟಿಕೆಟ್ ವಂಚನೆಯಲ್ಲಿ ಬಿಜೆಪಿ, ಸಂಘ ಪರಿವಾರ ಮುಖಂಡರು..? | Chaitra Kundapura
    Next Article ರೂಪಾ ಮೌದ್ಗೀಲ್ ಗೆ ಹುದ್ದೆ ಸಿಕ್ತು | Roopa Moudgil
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Cliftondef ರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • code promo 1xbet tours gratuits ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.