ಬೆಂಗಳೂರು,ಅ.8-
ಪರವಾನಗಿ ನೀಡುವಾಗ ಸಾರಿಗೆ ಇಲಾಖೆ ನೀಡಿರುವ ಷರತ್ತು ಉಲ್ಲಂಘಿಸಿರುವ Ola-Uber ವಾಹನಗಳನ್ನು ಸೀಜ್ ಮಾಡಲು ಆದೇಶ ನೀಡಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮ ಉಲ್ಲಂಘಿಸಿ ಪ್ರಯಾಣಿಕರಿಂದ ದುಬಾರಿ ದರ ವಸೂಲಿ ಮಾಡುತ್ತಿರುವ ವಾಹಗಳನ್ನು ಸೀಜ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ದುಬಾರಿ ದರ ವಿಧಿಸುತ್ತಿರುವ ಬಗ್ಗೆ ನೋಟಿಸ್ ನೀಡಲಾಗಿದೆ. ನೋಟಿಸ್‍ಗೆ ಆ ಸಂಸ್ಥೆಗಳಿಂದ ಉತ್ತರ ಪಡೆದು ಒಂದೆರಡು ದಿನದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೇವೆ ಒದಗಿಸಲು ಓಲಾ ಮತ್ತು ಊಬರ್ ಸಂಸ್ಥೆಗಳಿಗೆ ಲೈಸೆನ್ಸ್ ನೀಡಲಾಗಿತ್ತು. ಲೈಸೆನ್ಸ್ ನೀಡುವ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ನಿಯಮಗಳು ಉಲ್ಲಂಘನೆಯಾಗಬಾರದು ಎಂಬ ಷರತ್ತು ವಿಧಿಸಲಾಗಿತ್ತು. ಆದರೂ ಪ್ರತಿ ವರ್ಷ ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ದೂರು ಮತ್ತು ನೋಟಿಸ್‍ಗೆ ಆ ಸಂಸ್ಥೆಗಳು ನೀಡುವ ಉತ್ತರ ಪರಿಶೀಲಿಸಿದ ನಂತರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
Previous Articleಮೈಸೂರಿನ ಒಡನಾಡಿ ಸಂಸ್ಥೆಯ ಮುಖ್ಯಸ್ಥರು ಹೇಳಿದ್ದೇನು ಗೊತ್ತಾ? ಇದ್ದದ್ದು ಇದ್ದ ಹಾಗೆ ಈ ವಿಡಿಯೋ ದಲ್ಲಿ
Next Article ಕೇಂದ್ರಕ್ಕೆ ಆಸ್ತಿ ಮಾರಿ ಹಣಗಳಿಸುವ ಚಿಂತೆ!